ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆಯಿಂದ ಒಂಬುಡ್ಸ್​ಮನ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆ (Rural Development and Panchayat Raj Karnataka) ನೇಮಕಾತಿ ಭರ್ತಿಗೆ ಮುಂದಾಗಿದೆ. 9 ಒಂಬುಡ್ಸ್​ಮನ್​ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಈ ಸಂಬಂಧ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಯಾವುದೇ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

 

ಅರ್ಜಿ ಸಲ್ಲಿಕೆಗೆ ಜುಲೈ 9 ಕಡೆಯ ದಿನಾಂಕವಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದು ಕೊರತೆಗಳ ನಿವಾರಣೆಗಾಗಿ ಈ ಆಯ್ಕೆಗೆ ಇಲಾಖೆ ಮುಂದಾಗಿದೆ. ಜಿಲ್ಲಾ ಮಟ್ಟದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಕೆಳಕಂಡಂತೆ ಇದೆ.

ಸಂಸ್ಥೆಯ ಹೆಸರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕರ್ನಾಟಕ
ಹುದ್ದೆಗಳ ಸಂಖ್ಯೆ: 9
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು: ಒಂಬುಡ್ಸ್‌ಮನ್
ಸಂಬಳ: ನಿಯಮಗಳ ಪ್ರಕಾರ

ಹುದ್ದೆ ಹುದ್ದೆ ಸಂಖ್ಯೆ
ಬೆಂಗಳೂರು ಗ್ರಾಮಾಂತರ 1
ದಾವಣಗೆರೆ 1
ದಕ್ಷಿಣ ಕನ್ನಡ 1
ಕಲಬುರಗಿ 1
ಕೊಡಗು 1
ಮೈಸೂರು 1
ಉತ್ತರ ಕನ್ನಡ 1
ಉಡುಪಿ 1
ಯಾದಗಿರಿ 1

ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 66 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕರ್ನಾಟಕ ನಿಯಮಗಳ ಪ್ರಕಾರ

ಅರ್ಜಿ ಸಲ್ಲಿಕೆ: ಆಫ್​ಲೈನ್​ ಮೂಲಕ

ವಿಶೇಷ ಸೂಚನೆ
ಈ ಹುದ್ದೆಯೂ ಎರಡು ವರ್ಷಗಳ ಕಾಲ ಒಪ್ಪಂದ ಆಧಾರಿತ ಹುದ್ದೆಯಾಗಿದೆ.
ಅನುಭವ: ಈ ಹುದ್ದೆಗೆ ಸೇವೆ ಸಲ್ಲಿಸುವ ಅಭ್ಯರ್ಥಿಗಳು ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ ಅಥವಾ ಸಮಾಜ ಸೇವೆ/ ನಿರ್ವಹಣೆ ಕ್ಷೇತ್ರದಲ್ಲಿ 10 ವರ್ಷಗಳ ಸೇವಾನುಭವ ಹೊಂದಿರಬೇಕಾಗಿದೆ.

ಅರ್ಜಿ ಸಲ್ಲಿಕೆ: ಆಫ್​ಲೈನ್​ ಮೂಲಕ

ವಿಶೇಷ ಸೂಚನೆ
ಈ ಹುದ್ದೆಯೂ ಎರಡು ವರ್ಷಗಳ ಕಾಲ ಒಪ್ಪಂದ ಆಧಾರಿತ ಹುದ್ದೆಯಾಗಿದೆ.
ಅನುಭವ: ಈ ಹುದ್ದೆಗೆ ಸೇವೆ ಸಲ್ಲಿಸುವ ಅಭ್ಯರ್ಥಿಗಳು ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ ಅಥವಾ ಸಮಾಜ ಸೇವೆ/ ನಿರ್ವಹಣೆ ಕ್ಷೇತ್ರದಲ್ಲಿ 10 ವರ್ಷಗಳ ಸೇವಾನುಭವ ಹೊಂದಿರಬೇಕಾಗಿದೆ.

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್​ 8, 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 9, 2022

ಅರ್ಜಿ ಸಲ್ಲಿಕೆ ವಿಳಾಸ
ಆಯುಕ್ತರು, ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ಸಂಖ್ಯೆ 1243, ಕೆಎಸ್‌ಐಡಿಸಿ, ಐಟಿ ವಾರ್ಡ್, ಸೌತ್ ಬ್ಲಾಕ್, ರಾಜಾಜಿ ನಗರ, ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು 560044

ಅರ್ಜಿ ಸಲ್ಲಿಕೆ ಪ್ರಕ್ರಿಯೆ
-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
-ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ ಅರ್ಜಿ ಭರ್ತಿ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ವಿಳಾಸಕ್ಕೆ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಸಲ್ಲಿಸಬೇಕು.

[t4b-ticker]

You May Also Like

More From Author

+ There are no comments

Add yours