ಬಂಟ್ವಾಳ: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಕೆ. ಕುಲಾಲ್ ಅವರು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.
ಈ ಮೂಲಕ ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಸಾನ್ವಿ ಕೆ. ಆಯ್ಕೆಯಾಗಿದ್ದಾರೆ. ಸಾನ್ವಿ ಕೆ. ಅವರು ರಾಜ್ಯ ಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿ. ಅಶೋಕ್ ಆಚಾರ್ಯ ಬಂಟ್ವಾಳ ಅವರು ವಿದಾರ್ಥಿನಿಗೆ ಕರಾಟೆ ತರಬೇತಿ ನೀಡಿರುತ್ತಾರೆ.









