ಆಕ್ರಮ‌ ಮರಳುಗಾರಿಕೆ ವಿರುದ್ಧ ಸಮರ ಸಾರಿದ ದಿಟ್ಟ ಶಾಸಕ ಟಿ.ರಘುಮೂರ್ತಿ.

 

 

 

 

ಚಳ್ಳಕೆರೆ:
ಶಾಸಕ ಟಿ ರಘುಮೂರ್ತಿ ರವರ ನೇತೃತ್ವದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ ಮಾಡಿ ರೈತರ ಹಿತ ಕಾಪಾಡಿದ ಶಾಸಕ ಟಿ ರಘುಮೂರ್ತಿ ಅವರ ದಿಟ್ಟ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

 

 

ನದಿ ಮೂಲಗಳ ಉಳಿವಿಗೆ ಶಾಸಕರ ಅವಿರತ ಪ್ರಯತ್ನ.
ತಾಲ್ಲೂಕು ಮಟ್ಟದ ಅಧಿಕಾರಿಗಳಾದ ತಹಶೀಲ್ದಾರ್ ಮಲ್ಲಿಕಾರ್ಜುನ್, ಡಿವೈಎಸ್ಪಿ ಶ್ರೀಧರ್, ಪಿಎಸ್ಐ ರಾಘವೇಂದ್ರ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಲಿಂಗರಾಜು, ಚಂದ್ರಶೇಖರ್, ಕುಮಾರ್ ನಾಯಕ್ ತಂಡದೊಂದಿಗೆ ಕಾನೂನು ಬಾಹಿರ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ತಾಕುಗಳ ಮೇಲೆ ದಾಳಿ ಮಾಡಿ ಅಕ್ರಮ ಕಡಿವಾಣ ಹಾಕುವಂತೆ ಮಾಡಿದರು.
ಅಕ್ರಮ ಗಣಿಗಾರಿಕೆ ತಡೆಯುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಶಾಸಕ ಟಿ ರಘುಮೂರ್ತಿ ಅವರು ಯಾವುದೇ ಕಾರಣಕ್ಕೂ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆದರೆ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿ ಹಾಗು ಭೂವಿಜ್ಞಾನ ಇಲಾಖೆಯ ಕಣ್ಣು ತಪ್ಪಿಸಿ ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಗಣಿಗಾರಿಕೆ ಹಾಗೂ ಮರಳು ದಂಧೆ ನಡೆಯುತ್ತಿರುವ ಬಗ್ಗೆ ಹಾಗಾಗ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಗೋರ್ಲತ್ತು, ಕಲಮರಹಳ್ಳಿ, ನಾರಾಯಣಪುರ ಸೇರಿದಂತೆ ಅಕ್ರಮ ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ ಮಾಡಿ, ಅಕ್ರಮ ಗಣಿಗಾರಿಕೆ ಸ್ಥಳಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಅಧಿಕಾರಿಗಳೊಂದಿಗೆ ಅಕ್ರಮ ಗಣಿಗಾರಿಕೆ ಅಡ್ಡೆಗಳನ್ನು ಪರಿಶೀಲಿಸಿದ ಶಾಸಕರು, ನದಿ ಮೂಲಗಳನ್ನು ಉಳಿಸಿಕೊಳ್ಳುವುದು ಹಾಗೂ ರೈತರ ಹಿತ ಕಾಪಾಡುವ ಹಿತದೃಷ್ಟಿಯಿಂದ ಅಕ್ರಮ ಅಡ್ಡೆಗಳನ್ನು ತಡೆಗಟ್ಟಲು ದಿಟ್ಟ ನಿರ್ಧಾರ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

[t4b-ticker]

You May Also Like

More From Author

+ There are no comments

Add yours