30 ಲಕ್ಷ ವೆಚ್ಚದಲ್ಲಿ ಸಂತೆ ಮಾರುಕಟ್ಟೆಯಲ್ಲಿ ನೆಲಹಾಸಿನ ವ್ಯವಸ್ಥೆ: ಶಾಸಕ‌ ಟಿ.ರಘುಮೂರ್ತಿ

 

ಚಳ್ಳಕೆರೆ-12 ನಗರದ ಅಭಿವೃದ್ಧಿಗೆ ಪ್ರತಿಯೊಬ್ಬ ಪ್ರತಿನಿಧಿಗಳು, ನಗರಸಭೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು, ನಗರದ ಸಂತೆ ಮಾರುಕಟ್ಟೆಯ ಆವರಣದಲ್ಲಿ ನಡೆದ ನೆಲಹಾಸುಗಳಿಗೆ ಚಾಲನೆ ನೀಡಿದರು. ಕಳೆದ ಹತ್ತಾರು ವರ್ಷಗಳಿಂದ ಸಂತೆ ಮೈದಾನಕ್ಕೆ ನೆಲಹಾಸು ಹಾಕುವಂತೆ ಬೇಡಿಕೆ ಇಟ್ಟಿದ್ದರು. ಮಳೆ ಸಂದರ್ಭದಲ್ಲಿ ಸಂತೆ ವ್ಯಾಪಾರ, ವ್ಯವಹಾರ ನಡೆಸಲು ಸಾಧ್ಯವಾಗುತ್ತಿರಲಿಲ್ಲ ಈ ಸಂಬಂಧ ಸಂಘದ ಸದಸ್ಯರು ಹಲವಾರು ಬಾರಿ ಮನವಿ ಮಾಡಿದ ಹಿನ್ನೆಲೆಯಲ್ಲಿ 30ಲಕ್ಷ ವೆಚ್ಚದಲ್ಲಿ ನೆಲಹಾಸು ಹಾಕುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಗರದ ಅಭಿವೃದ್ಧಿಗೆ ನಗರಸಭೆ ಪ್ರಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಚಂದ್ರಪ್ಪ, ಅಧ್ಯಕ್ಷೆ ಸುಮಕ್ಕ ಅಂಜನಪ್ಪ , ಉಪಾಧ್ಯಕ್ಷೆ ಮಂಜುಳಾ ಆರ್ ಪ್ರಸನ್ನ ಕುಮಾರ್, ಸದಸ್ಯರುಗಳಾದ ಜೈತುಂಬಿಮಾಲೀಕ ಸಾಬ್, ಸುಮಾ ಭರಮಯ್ಯ, ಕವಿತಾ ಬೋರಯ್ಯ, ವೀರಭದ್ರಯ್ಯ, ರಮೇಶ್ ಗೌಡ, ಚಳ್ಳಕೆರಪ್ಪ, ವಿಶ್ವಕರ್ಮ ರಾಜ್ಯ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್,ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಖಾದರ್, ಮುಖಂಡರುಗಳಾದ ಬೋರಣ್ಣ, ಅಂಜಿನಪ್ಪ ಹಾಗೂ ನಗರಸಭೆ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ಸಂತೆ ಮಾರುಕಟ್ಟೆಯ ಅಂಗಡಿ ಮಾಲೀಕರುಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours