ವಿದ್ಯುತ್ ಸಮಸ್ಯೆಗೆ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

 

ಚಿಕ್ಕೋಡಿ : ಕೇಂದ್ರದಿಂದ ಬರುವ ವಿದ್ಯುತ್ ಹಠಾತ್ತನೆ ನಿಲ್ಲಿಸಿದ ಪರಿಣಾಮವಾಗಿ ರಾಜ್ಯದಲ್ಲಿ ತೊಂದರೆ ಉಂಟಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವರಾದ (Minister) ಸತೀಶ್ ಜಾರಕಿಹೊಳಿ ಹೇಳಿದರು.

ಸೋಮವಾರ ಸಂಜೆ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ದಕ್ಷಿಣ ಭಾರತಕ್ಕೆ ಕೇಂದ್ರ ಸರ್ಕಾರದಿಂದ ಬರುವ ವಿದ್ಯುತ್ ನಿಲ್ಲಿಸಿದ್ದರಿಂದ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಅಭಾವ ಕಂಡುಬಂದಿದೆ. ನೀರಿನ ಅಭಾವದಿಂದ ಕೆಲವು ಕಡೆ ವಿದ್ಯುತ್ ತಯಾರಿಕೆ ಆಗುತ್ತಿಲ್ಲ. ವಿಜಯಪುರ, ರಾಯಚೂರು ವಿದ್ಯುತ್ ತಯಾರಿಕಾ ಘಟಕಗಳು ರಿಪೇರಿ ಇರುವುದರಿಂದ ನಮಗೆ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಹಳೆ ದ್ವೇಷ ಹಿನ್ನಲೆ ಹೊಲದಲ್ಲಿ ಮಹಿಳೆಯ ಬರ್ಬರ ಕೊಲೆ

ಸಚಿವರಾದ ಬಳಿಕ ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ಮಾಡೋದಾಗಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಸಚಿವರಾದ ಬಳಿಕ ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ಮಾಡೋದಾಗಿ ಹೇಳಿದ್ದೆ. ಶಾಸಕರ ಬಳಿ ಮಾತನಾಡಿ ದಿನಾಂಕ ನಿಗದಿ ಮಾಡಿ ಸದ್ಯದಲ್ಲೇ ಚಿಕ್ಕೋಡಿ ಮತ್ತು ವಿವಿಧ ತಾಲೂಕಿನಲ್ಲಿ ಕೆಡಿಪಿ ಸಭೆ ಮಾಡಲಾಗುವುದು. ಈಗಾಗಲೇ ರಾಯಬಾಗ, ಸವದತ್ತಿ ತಾಲೂಕಿನಲ್ಲಿ ಸಭೆ ಮಾಡಿದ್ದೇನೆ. ಶೀಘ್ರವೇ ಚಿಕ್ಕೋಡಿಯಲ್ಲಿಯೂ ಸಭೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

[t4b-ticker]

You May Also Like

More From Author

+ There are no comments

Add yours