ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಇ.ಎಲ್.ಸಿ ಸ್ಪರ್ಧೆಗಳ ಆಯೋಜನೆ: 60 ಮಕ್ಕಳು ವಿವಿಧ ಸ್ಪರ್ಧೆಗಳು ಭಾಗಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.3:
ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಚಿತ್ರದುರ್ಗ ನಗರದ ಶ್ರೀ ಬೃಹನ್ಮಠ ಪ್ರೌಢಶಾಲೆಯಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಇ.ಎಲ್.ಸಿ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಚಿತ್ರದುರ್ಗ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ತಿಪ್ಪೇಸ್ವಾಮಿ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳಾದ ಪರಶುರಾಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲೆಯ ಆರು ತಾಲ್ಲೂಕಿನಿಂದ ಒಟ್ಟು 60 ಮಕ್ಕಳು ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ತಯಾರಿಕೆ, ರಸಪ್ರಶ್ನೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ವಿಷಯ ಪರಿವೀಕ್ಷಕರು ಹಾಗೂ ಸ್ವೀಪ್ ನೋಡಲ್ ಅಧಿಕಾರಿಗಳಾದ ಹೆಚ್.ಟಿ. ಚಂದ್ರಣ್ಣ,  ಬೃಹನ್ಮಠ ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ಆಶಾರಾಣಿ, ಹೊಳಲ್ಕೆರೆ ಸಮಾಜ ವಿಜ್ಞಾನ ಸಂಘದ ಅಧ್ಯಕ್ಷರಾದ ರಾಜಕುಮಾರ, ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours