ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಏಪ್ರಿಲ್ 9ರಂದು ಸಂಜೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಅಧಿಕೃತ ವೆಬ್ಸೈಟ್ನಲ್ಲಿ ತಮ್ಮ ನೋಂದಣಿ ಸಂಖ್ಯೆ ಬಳಸಿ ಫಲಿತಾಂಶವನ್ನು ಪರಿಶೀಲಿಸಬಹುದು. ಮರುಮೌಲ್ಯಮಾಪನ ಮತ್ತು ಸ್ಕ್ಯಾನ್ಡ್ ಪ್ರತಿಗಳಿಗೆ ಅರ್ಜಿ ಸಲ್ಲಿಸುವ ಅವಕಾಶವೂ ಇರುತ್ತದೆ.
ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನದ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಅಂಕಪಟ್ಟಿ ಅಪ್ಲೋಡ್ ಮಾಡುವ ಎಲ್ಲಾ ತಾಂತ್ರಿಕ ಸಿದ್ಧತೆಗಳನ್ನು ಮಾಡಿಕೊಂಡಿದೆ.





