ರಾಜ್ಯದಲ್ಲಿ ಕೋವಿಡ್ ಆರ್ಭಟ,ಪಾಸಿಟಿವ್ ಕೇಸ್ ಎಷ್ಟು ನೋಡಿ

 

 

 

 

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ( Covid19 )  ಆರ್ಭಟ ಮತ್ತೆ  ಶುರುವಾಗಿದ್ದು ಜನರು ಆತಂಕಕ್ಕೆ ಒಳಾಗಾಗಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಇಂದು ಒಂದೇ ದಿನ 22 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಮಾಹಿತಿ ಬಿಡುಗಡೆ ಮಾಡಿದ್ದು  ಬೆಂಗಳೂರು ನಗರದಲ್ಲಿ 359 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಇವರಲ್ಲಿ 19 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದು ವರದಿಯಲ್ಲಿ ದೃಢಪಟ್ಟಿದೆ ಎಂದಿದೆ.

 

 

ಚಿಕ್ಕಬಳ್ಳಾಪುರದಲ್ಲಿ  94 ಮಂದಿಯನ್ನು ಪರೀಕ್ಷೆ ( Covid19 Test ) ನಡೆಸಲಾಗಿದೆ. ಧಾರವಾಡದಲ್ಲಿ ಐವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಯಾರಿಗೂ ಸೋಂಕು ದೃಢಪಟ್ಟಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು ಅವರಲ್ಲಿ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಶೈಕ್ಷಣಿಕ ಪ್ರಗತಿ ಜೊತೆಗೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ:ಟಿ.ರಘುಮೂರ್ತಿ ಕರೆ

ಬಳ್ಳಾರಿಯಲ್ಲಿ ಜಿಲ್ಲೆಯಲ್ಲಿ  ಪರೀಕ್ಷೆಗೆ ಒಳಗಾದಂತ ಇಬ್ಬರಿಗೂ ಕೋವಿಡ್ ದೃಢವಾಗಿದೆ  ಎಂದು ವರದಿಯಲ್ಲಿ ತಿಳಿದು ಬಂದಿದೆ. ಹೀಗಾಗಿ ಇಂದು ರಾಜ್ಯಾದ್ಯಂತ  22 ಮಂದಿಗೆ ಕೋವಿಡ್  ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಮಾಹಿತಿ ನೀಡಿದೆ.

ಒಟ್ಟಾರೆಯಾಗಿ  ಆರ್ ಟಿ ಪಿಸಿಆರ್ ಮೂಲಕ 407 ಪರೀಕ್ಷೆಯನ್ನು ನಡೆಸಲಾಗಿತ್ತು. ಅವರಲ್ಲಿ 19 ಮಂದಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇನ್ನೂ ರ್ಯಾಟ್( reyt) ಮೂಲಕ 401 ಜನರಿಗೆ  ಪರೀಕ್ಷೆ ನಡೆಸಲಾಗಿತ್ತು. ಅವರಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ. ಒಟ್ಟಾರೆ 808 ಮಂದಿಯ ಪರೀಕ್ಷೆಯಲ್ಲಿ ಇಂದು 22 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

[t4b-ticker]

You May Also Like

More From Author

+ There are no comments

Add yours