ಚಿತ್ರದುರ್ಗ(ಕರ್ನಾಟಕ ವಾರ್ತೆ)ಅಕ್ಟೋಬರ್01:
ರೇಷ್ಮೆ ಇಲಾಖೆಯಿಂದ 2021-22ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅ.10 ಅರ್ಜಿ ಸಲ್ಲಿಸಲು ಕೊನೆಯ ದಿನ.
ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರ ಅರ್ಹತೆಗಳು: ಕನಿಷ್ಟ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ಬುಕ್, ರೇಷ್ಮೆ ಮೊಟ್ಟೆ/ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ಈ ಮೇಲ್ಕಂಡ ಅರ್ಹತೆ ಹೊಂದಿರುವ ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು, ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿಗಳನ್ನು ದಾಖಲಾತಿಗಳೊಂದಿಗೆ ಒದಗಿಸಿ ಅರ್ಜಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 10ರೊಳಗೆ ಅರ್ಜಿಯನ್ನು ಪಡೆದ ಕಚೇರಿಗೆ ಸಲ್ಲಿಸಬೇಕು ಎಂದು ರೇಷ್ಮೆ ಉಪನಿರ್ದೇಶಕರು ತಿಳಿಸಿದ್ದಾರೆ.
======
[t4b-ticker]
+ There are no comments
Add yours