ಕರ್ನಾಟಕದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆಹಾರ ಸುರಕ್ಷತೆ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಕೃತಕ ‘ಅನಲಾಗ್ ಪನ್ನೀರ್’ ಬಳಕೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿದೆ. ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ರಾಸಾಯನಿಕ ಬಳಸಿ ತಯಾರಿಸುವ ಈ ಪನ್ನೀರ್ ಆರೋಗ್ಯಕ್ಕೆ ಹಾನಿಕರ. ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಇನ್ನು ಮುಂದೆ ಶುದ್ಧ ಪನ್ನೀರ್ ಮಾತ್ರ ಬಳಸಬೇಕು. ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.





