ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ: ಅರ್ಜಿ ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.12:
2023-24ನೇ ಸಾಲಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
2023-24ನೇ ಸಾಲಿನಲ್ಲಿ ಅಕ್ಟೋಬರ್ 28ರಂದು ನಡೆಯಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಮಟ್ಟದಲ್ಲಿ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವ್ಯಕ್ತಿಗಳು ತಮ್ಮ ಪೂರ್ಣ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳವರ ಕಚೇರಿ, ಜೆಸಿಆರ್ ಬಡಾವಣೆ, 4ನೇ ಕ್ರಾಸ್ (ಪೂರ್ವ), ಗಣೇಶ ದೇವಸ್ಥಾನದ ಹತ್ತಿರ ಹಾಗೂ ಆಯಾ ತಾಲ್ಲೂಕಿನ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿಗಳನ್ನು ಪಡೆದು ಮಾಹಿತಿಯೊಂದಿಗೆ ಭರ್ತಿಮಾಡಿ ಸೆಪ್ಟೆಂಬರ್ 30 ರಂದು ಸಂಜೆ 5:30 ರೊಳಗಾಗಿ ಆಯಾ ತಾಲ್ಲೂಕಿನ ಕಚೇರಿಗೆ ಸಲ್ಲಿಸಬೇಕು.
ಷರತ್ತುಗಳು: ಅರ್ಜಿದಾರರ ವಯಸ್ಸು ಕನಿಷ್ಟ 35 ವರ್ಷದವರಾಗಿರಬೇಕು. ಪ್ರಶಸ್ತಿಗೆ ಅರ್ಜಿ ಸಲ್ಲಿಸಿರುವ ವ್ಯಕ್ತಿಯು ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರಬಾರದು. ಅರ್ಜಿದಾರರು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿರುವ ಬಗ್ಗೆ ವೈಯಕ್ತಿಕ ವಿವರಗಳೊಂದಿಗೆ ದಾಖಲೆಗಳ ಸಹಿತ ಅರ್ಜಿ ಸಲ್ಲಿಸುವುದು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours