ಸಿದ್ದರಾಮಯ್ಯ ನನಗೆ ಸಹಕಾರ ನೀಡಬೇಕು: ಡಿಕೆಶಿ

 

ಬೆಂಗಳೂರು,ಮೇ 14- ಈವರೆಗೂ ನಾನೇ ಸೋತು ತಲೆ ಬಾಗಿಸಿ ಸಹಕಾರ ನೀಡಿದ್ದೇನೆ, ಸಚಿವ ಸ್ಥಾನ ಸಿಗದೆ ಇದ್ದಾಗಲೂ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದೇನೆ. ಈಗ ಸಿದ್ದರಾಮಯ್ಯ ಅವರು ತಮಗೆ ಸಹಕಾರ ನೀಡಬೇಕು ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.

ತುಮಕೂರು ಜಿಲ್ಲೆಯ ನೋಣವಿನಕೆರೆಯಲ್ಲಿರುವ ಕಾಡಸಿದ್ದೇಶ್ವರಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗುವುದು, ನಂತರ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಈ ಮೊದಲು ಕೆಪಿಸಿಸಿ ಅಧ್ಯಕ್ಷರಾಗಿದ್ದ ದಿನೇಶ್ ಗುಂಡುರಾವ್, ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಉಪಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು, ತಮ್ಮಿಂದ ಆಗುವುದಿಲ್ಲ ಎಂದು ರಾಜೀನಾಮೆ ನೀಡಿದ್ದರು. ಆ ವೇಳೆ ಎಐಸಿಸಿ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದರು ಎಂದು ಹೇಳಿದರು.

[t4b-ticker]

You May Also Like

More From Author

+ There are no comments

Add yours