ಸಿದ್ದು ಲೆಕ್ಕ |ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಅನುದಾನದ ಗ್ಯಾರೆಂಟಿ

 

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಗೆ ಬಜೆಟ್ ನಲ್ಲಿ ಬಂಪರ್ ಅನುದಾನವನ್ನು ಒದಗಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ ಬಜೆಟ್‍ನಲ್ಲಿ ಕರ್ನಾಟಕ ಹಳೆಯ ಜಿಲ್ಲೆಯಾದರೂ ಸಹ ಮೆಡಿಕಲ್ ಕಾಲೇಜು ಕನಸು ಕಾಣುತ್ತಿದ್ದ ಚಿತ್ರದುರ್ಗ ಜಿಲ್ಲೆಗೆ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣದ ಭರವಸೆಯ ಗ್ಯಾರೆಂಟಿ ನೀಡಿದೆ.

ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಕಟ್ಟಡ, ವಿದ್ಯಾರ್ಥಿಗಳ ವಸತಿ ನಿಲಯ, ಸಿಬ್ಬಂದಿಗಳ ವಸತಿ ಗೃಹಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಪ್ರಸ್ತಾಪಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂಬಿಬಿಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ ಎಂದು ಬಜೆಟ್ ಭಾಷಣದ ಪ್ರತಿಯಲ್ಲಿ ಉಲ್ಲೇಖಿಸಿದ್ದು ಜಿಲ್ಲೆಯಲ್ಲಿ ನಿರ್ಮಾಣವಾಗುವ ನೂತನ ಸರ್ಕಾರಿ ಮೆಡಿಕಲ್ ಕಾಲೇಜು 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣದ ಅಭಯವನ್ನು ಸರ್ಕಾರ ಸಿಕ್ಕಿದೆ.

2024-25ನೇ ಸಾಲಿನಲ್ಲಿ ವೈದ್ಯಕೀಯ ವಿಜ್ಞಾನ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಈ ಅನುದಾನ ಇದೇ ಸಾಲಿನಲ್ಲಿ ಪ್ರಾರಂಭವಾದ ಹಿನ್ನಲೆಯಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಈ ವರ್ಷ ಇಂತಿಷ್ಟು ಅನುದಾನ ಸಹ ದೊರೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಜೆಟ್ ನಲ್ಲಿ ನೀಡಿದ ಯೋಜನೆಗಳು

ಚಿತ್ರದುರ್ಗ ಜಿಲ್ಲೆಯ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಒಂದಿಷ್ಟು ವೇಗದ ಜೊತೆಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಒಂದಿಷ್ಟು ಮೂಲಭೂತ ಸೌಲಭ್ಯ ಒದಗಿಸಲು ಸರ್ಕಾರ ಬಜೆಟ್ ನಲ್ಲಿ ಹಣ ಘೋಷಿಸಿರುವುದು ದುರ್ಗದ ಜನರಿಗೆ ಮೆಡಿಕಲ್ ಕಾಲೇಜು‌ ಕನಸು ನನಸಾಗುವ ಮೊದಲ‌ ಹೆಜ್ಜೆಗೆ ವೇಗ ದೊರೆತಂತಾಗಿದೆ.

 

[t4b-ticker]

You May Also Like

More From Author

+ There are no comments

Add yours