ಕುಕ್ಕೇಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಗುರುವಾಯನಕೆರೆ ಯೋಜನಾ ಕಚೇರಿಯ ಮಾರ್ಗದರ್ಶನದಲ್ಲಿ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಗರ್ಡಾಡಿ ವಲಯದ ಕುಕ್ಕೇಡಿ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ ನಡೆಯಿತು.
ಕುಕ್ಕೇಡಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ, ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ಡಾ. ಹೆಗ್ಗಡೆ ದಂಪತಿಗಳ ಕೊಡುಗೆಯನ್ನು ಸ್ಮರಿಸಿದರು. ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ, ಶಿಬಿರವು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು, ಹಿರಿಯರಾದ ಅಶೋಕ್ ಪಾಣೂರು, ವಲಯದ ಒಕ್ಕೂಟ ಅಧ್ಯಕ್ಷರಾದ ವರದ ಕುಲಾಲ್, ಶಿಕ್ಷಕಿ ಶ್ರೀಮತಿ ಅಶ್ವಿನಿ, ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ, ವಲಯ ಮೇಲ್ವಿಚಾರಕಿ ಹೇಮಾವತಿ ಉಪಸ್ಥಿತರಿದ್ದರು.






