ಜನರ ಸಮಸ್ಯೆಗಳಿಗೆ ತಿಂಗಳೊಳಗೆ ಪರಿಹಾರ ಕೊಡಿ: ಸಚಿವ ಡಿ.ಸುಧಾಕರ್ ಸೂಚನೆ

 

ಜಿಲ್ಲಾ ಮಟ್ಟದ ಜನತಾ ದರ್ಶನ
ಚತ್ರದುರ್ಗ(ಕರ್ನಾಟಕ ವಾರ್ತೆ)ಜ.02:
ಜನತಾ ದರ್ಶನದಲ್ಲಿ ಸಾರ್ವಜನಿಕರು ನೀಡುವ ಅಹವಾಲುಗಳನ್ನು ತಿಂಗಳೊಳಗೆ ಪರಿಹರಿಸಿ, ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೊಳಲ್ಕೆರೆಯ ಸಂವಿಧಾನ ಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೊಳಲ್ಕೆರೆಯಲ್ಲಿ ಆಯೋಜಿಸಿರುವ ಜನತಾದರ್ಶನ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಸಚಿವರು, ಜನತಾ ದರ್ಶನದಲ್ಲಿ ಸ್ವೀಕೃತವಾಗುವ ಸಾರ್ವಜನಿಕರ ಕುಂದು ಕೊರತೆ, ಸಮಸ್ಯೆಗಳ ಅರ್ಜಿಗಳನ್ನು ಒಂದು ತಿಂಗಳೊಳಗೆ ವಿಲೇವಾರಿ ಮಾಡಬೇಕು. ಜನರಿಗೆ ಸೂಕ್ತವಾದ ಸ್ಪಂದನೆ ದೊರಕಬೇಕು. ಜನರ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸಬೇಕು ಎಂದು ಈಗಾಗಲೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.
ಸಾರ್ವಜನಿಕರು ಪ್ರತಿನಿತ್ಯವೂ ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಸರ್ಕಾರಿ ಕಚೇರಿಗಳಿಗೆ ಅಲೆದಾಟ ಮಾಡುವುದನ್ನು ತಪ್ಪಿಸಿ, ಜನರ ಬಳಿಗೇ ಅಧಿಕಾರಿಗಳು, ಜನಪ್ರತಿನಿಧಿಗಳು ತೆರಳಿ, ಜನರ ದೂರು ದುಮ್ಮಾನಗಳನ್ನು ಆಲಿಸಿ ಪರಿಹರಿಸಬೇಕೆಂಬುದು ನಮ್ಮ ಸರ್ಕಾರದ ಆಶಯವಾಗಿದೆ.  ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ, ಜಿಲ್ಲೆಯಾದ್ಯಂತ ಜನತಾ ದರ್ಶನ ಕಾರ್ಯಕ್ರಮಗಳ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಸಚಿವರು ಹೇಳಿದರು.
ಹೊಳಲ್ಕೆರೆ ಶಾಸಕ ಡಾ. ಎಂ.ಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ, ಜನರ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಗಳು ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಹಾಗೂ ತಾಲ್ಲೂಕು ಹಂತದಲ್ಲಿ ಆಯೋಜಿಸಲು ಸೂಚನೆ ನೀಡಿದ್ದಾರೆ. ಜನರ ಮನೆ ಬಾಗಿಲಿಗೆ ತೆರಳಿ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶ ಜನತಾ ದರ್ಶನ ಕಾರ್ಯಕ್ರಮ ಹೊಂದಿದೆ. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಕೇಂದ್ರಗಳಿಗೆ ಅಲೆದಾಟ ಮಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು. ಯಾವುದೇ ಸರ್ಕಾರವಿದ್ದರೂ ಸಾರ್ವಜನಿಕರ ಕಷ್ಟಗಳನ್ನು ಪರಿಹರಿಸಲು ಪ್ರಯತ್ನಿಸುತ್ತದೆ. ಹಿಂದಿನ ಸರ್ಕಾರದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಸಲಾಗುತ್ತಿತ್ತು, ಈಗಿನ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಜನತಾದರ್ಶನ ಮೂಲಕ ಜನರನ್ನು ತಲುಪುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಜನರು ಸಲ್ಲಿಸಿದ ಅಲವಾಲುಗಳ ಇತ್ಯರ್ಥಕ್ಕೆ ಒಂದು ತಿಂಗಳ ಗಡುವು ನೀಡಲಾಗಿದೆ. ಪರಿಹಾರ ದೊರಕದಿದ್ದರೆ ಮತ್ತೊಮ್ಮೆ ನನ್ನ ಗಮನಕ್ಕೆ ತರಬಹುದು. ಜನಪ್ರತಿನಿಧಿಗಳು ನೀತಿ, ನ್ಯಾಯ ಹಾಗೂ ಧರ್ಮದಿಂದ ಆಡಳಿತ ನಡೆಸಬೇಕು.  ಸರ್ಕಾರಿ ಕಟ್ಟಡಗಳು, ರಸ್ತೆ, ಶಾಲಾ ಕಾಲೇಜುಗಳು, ನೀರಾವರಿ ಯೋಜನೆಗಳು ಜನಪ್ರತಿನಿಧಿಗಳ ಸಾಧನೆಯನ್ನು ಬಿಂಬಿಸುತ್ತವೆ ಎಂದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ 7 ಜನತಾ ದರ್ಶನ ಕಾರ್ಯಮಕ್ರಗಳನ್ನು ವಿವಿಧ ತಾಲ್ಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ. 8ನೇ ಜನತಾ ದರ್ಶನ ಕಾರ್ಯಕ್ರಮವನ್ನು ಹೊಳಲ್ಕೆರೆ ಪಟ್ಟಣದಲ್ಲಿ ಆಯೋಜಿಸಲಾಗಿದೆ. ಈವರೆಗೂ ಜನತಾದರ್ಶನದಲ್ಲಿ ಒಟ್ಟು 1585 ಅರ್ಜಿಗಳು ಸ್ವೀಕರಿಸಲಾಗಿದ್ದು, 1286 ಅರ್ಜಿಗಳನ್ನು ವಿಲೇ ಮಾಡಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದೆ. 299 ಅರ್ಜಿಗಳು ಇತ್ಯರ್ಥ ಬಾಕಿ ಇದೆ. ಇದರಲ್ಲಿ ಕಂದಾಯ ಇಲಾಖೆ ಸಂಬಂಧಿಸಿದ 144 ಹಾಗೂ ವಿವಿಧ ಇಲಾಖೆ ಸೇರಿದ 155 ಅರ್ಜಿಗಳು ಬಾಕಿ ಇವೆ ಎಂದರು.
ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಕೇಂದ್ರಗಳಿಗೆ ಅಲೆದಾಟ ಮಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು. ಜನತಾ ದರ್ಶನದಲ್ಲಿ ಸಲ್ಲಿಸಿದ ಅರ್ಜಿಗಳನ್ನು ಐಪಿಜಿಆರ್‍ಎಸ್ ಪೆÇೀರ್ಟಲ್ ಮೂಲಕ ಗಣಕೀಕೃತಗೊಳಿಸಲಾಗುವುದು. ಆಡಳಿತದಲ್ಲಿ ಪಾರ್ದರ್ಶಕತೆ ತರುವ ಸಲುವಾಗಿ ಸಕಾಲ ಹಾಗೂ ಇ-ಆಫೀಸ್ ಜಾರಿ ಮಾಡಲಾಗಿದೆ ಎಂದರು.
ಬರಗಾಲಕ್ಕೆ ಸಂಬಂಧಿಸಿದ ಜಿಲ್ಲೆಯ ಎಲ್ಲಾ ಮಾಹಿತಿಗಳನ್ನು ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಸಲ್ಲಿಸಲಾಗಿದೆ.  ಈ ಮೊದಲು ಬೆಳೆ ಪರಿಹಾರದ ಹಣವನ್ನು “ಪರಿಹಾರ ಪೋರ್ಟಲ್” ಮೂಲಕ ರೈತರಿಗೆ ಪಾವತಿಸಲಾಗುತ್ತಿತ್ತು.  ಆದರೆ ಈಗ ಈ ಕಾರ್ಯದಲ್ಲಿ ಇನ್ನಷ್ಟು ನಿಖರತೆ ಹಾಗೂ ವೇಗ ತರಲು ಬೆಳೆ ಪರಿಹಾರದ ಮೊತ್ತವನ್ನು ಫ್ರುಟ್ಸ್ ತಂತ್ರಾಂಶದ ಮಾಹಿತಿ ಆಧರಿಸಿ ಸರ್ಕಾರ ನೇರವಾಗಿ ರೈತರ ಖಾತೆಗೆ ಪರಿಹಾರದ ಮೊತ್ತ ಜಮೆ ಮಾಡಲಿದೆ. ಜಿಲ್ಲೆಯಲ್ಲಿ ಶೇ.80 ರಷ್ಟು ರೈತರು ಫ್ರುಟ್ಸ್ ನೋಂದಣಿ ಮಾಡಿಕೊಂಡಿದ್ದಾರೆ. ಉಳಿದ ರೈತರು ಸಹ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿದ ಜಮೀನು ಆಧರಿಸಿ ಪರಿಹಾರ ಧನ ದೊರಕಲಿದೆ. ಹಾಗಾಗಿ ರೈತರು ಪ್ರುಟ್ಸ್ ನೋಂದಣಿಯಲ್ಲಿ ತಮ್ಮ ಹೆಸರಿನಲ್ಲಿ ಇರುವ ಒಟ್ಟು ವ್ಯವಸಾಯ ಭೂಮಿಯ ನಿಖರ ಪ್ರಮಾಣವನ್ನು ನೋಂದಣಿ ಮಾಡಿಸಬೇಕು.  ಇದಕ್ಕಾಗಿ ಸಂಬಂಧಪಟ್ಟ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು, ಕೃಷಿ ಅಥವಾ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬೇಕು.  ಬರ ಪರಿಹಾರ ಧನವನ್ನು ಹೊಸ ತಂತ್ರಾಂಶ ಆಧರಿಸಿ, ಜಮೆ ಮಾಡುವುದರ ಮೂಲಕ, ಚಳ್ಳಕೆರೆ ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ರಾಜ್ಯ ಸರ್ಕಾರ ಈ ಯೋಜನೆಗೆ ಶೀಘ್ರದಲ್ಲಿ ಚಾಲನೆ ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಫಲಾನುಭವಿಗಳಿಗೆ ಸೌಲಭ್ಯ ವಿತರಣೆ:
***********ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಲಾಯಿತು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಹಾಗೂ ಅರ್ನಿಬಂಧಿತ ಅನುದಾನದಲ್ಲಿ 6 ಹಾಗೂ ಜಿಲ್ಲಾ ಖನಿಜ ಪತಿμÁ್ಠನ ಟ್ರಸ್ಟ್ ಅನುದಾನದಲ್ಲಿ 9 ಸೇರಿ ಒಟ್ಟು 15 ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ವಿವಾಹ ಪೆÇ್ರೀತ್ಸಾಹ ಧನ ಯೋಜನೆ ಅಡಿ 3 ದಂಪತಿಗಳಿಗೆ ತಲಾ ರೂ.50,000 ಗಳ ಚೆಕ್ ನೀಡಲಾಯಿತು.
ಪಳಕೆಹಳ್ಳಿ ಗ್ರಾಮದ ಮಾರಮ್ಮ ಮಹಿಳಾ ಸ್ವ ಸಹಾಯ ಸಂಘ ಹಾಗೂ ಚಿಕ್ಕನಕಟ್ಟೆ ಗ್ರಾಮದ ಮಂಜುನಾಥ ಮಹಿಳಾ ಸ್ವ ಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿ ಪ್ರತಿ ಸದಸ್ಯರಿಗೆ ರೂ.15 ಸಾವಿರದಂತೆ 2 ಸಂಘಗಳಿಗೆ ತಲಾ ರೂ. 2.50 ಲಕ್ಷ ಸಹಾಯಧನ ಮಂಜೂರಾತಿ ಪತ್ರವನ್ನು ಸಾಂಕೇತಿಕವಾಗಿ ನೀಡಲಾಯಿತು. ರೈತ ಆತ್ಮಹತ್ಯೆ ಪರಿಹಾರ, ಸುಕನ್ಯಾ ಸಮೃದ್ಧ ಯೋಜನೆ, ಪಿ.ಎಂ.ಆವಾಸ್ ಯೋಜನೆ, ಪೆÇೀಷಣಾ ಅಭಿಯಾನ್, ಪೌತಿ ಖಾತೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮೂವರು ಗರ್ಭಿಣಿಯರಿಗೆ ವೇದಿಕೆ ಮೇಲೆ ಸೀಮಂತ ಕಾರ್ಯ ನೆರವೇರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಶಾಸಕ ಡಾ. ಎಂ. ಚಂದ್ರಪ್ಪ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಅವರನ್ನು ವಿಶೇಷ ಅಲಂಕೃತ ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮೂಲಕ ಸಂವಿಧಾನ ಸೌಧದ ಆವರಣಕ್ಕೆ ಕರೆತರಲಾಯಿತು.  ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಾಮಗರಿ, ಚಿಕ್ಕಜಾಜೂರು-ಗಂಜಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ವಸತಿ ಗೃಹಗಳ ನಿರ್ಮಾಣ, ಹೊಳಲ್ಕೆರೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಶಂಕುಸ್ಥಾಪನೆ ನೆರವೇರಿಸಿದರು.
ಹೊಳಲ್ಕೆರೆ ಪುರಸಭೆ ವತಿಯಿಂದ ಪರಿಶಿಷ್ಟ ಜಾತಿ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಕ್ಕೆ ರೂ.80 ಸಾವಿರ ವೆಚ್ಚದಲ್ಲಿ ನೀಡಲಾದ 8 ಅಲ್ಮಾರಿಗಳು, ರೂ.2 ಲಕ್ಷ ವೆಚ್ಚದಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿ ನಿಲಯಕ್ಕೆ ನೀಡಲಾದ 2 ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯಕ್ಕೆ ನೀಡಲಾದ 2 ಆರ್.ಓ.ಘಟಕಗಳು ಹಾಗೂ ರೂ. 40 ಸಾವಿರ ವೆಚ್ಚದ 2 ಕಾಟುಗಳನ್ನು ಹಸ್ತಾಂತರಿಸಿದರು.
ಸಂವಿಧಾನ ಸೌಧ ಮುಂದಿನ ಆವರಣದಲ್ಲಿ ಆಯೋಜಿಸಲಾದ ವಿವಿಧ ಇಲಾಖೆಗಳ ಹಾಗೂ ಮಹಿಳಾ ಸ್ವ ಸಹಾಯ ಸಂಘಗಳ ವಸ್ತು ಪ್ರದರ್ಶನ ಮಳಿಗೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಯಿತು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ 8 ವಿವಿಧ ಕೌಂಟರ್‍ಗಳನ್ನು ತರೆದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಬೀಬಿ ಫಾತಿಮಾ ಸೇರಿದಂತೆ ಹೊಳಲ್ಕೆರೆ ಪುರಸಭಾ ಸದಸ್ಯರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು..
[t4b-ticker]

You May Also Like

More From Author

+ There are no comments

Add yours