ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೆಟ್ ಪದವಿ ಪ್ರಪ್ರದಾನ ಮಾಡಿದರು.
ನ. 27 ರಂದು ರಾಜಭವನದಲ್ಲಿ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಜಯಕರ ಎಸ್.ಎಂ.ಕುಲಸಚಿವೆ ಕೆ.ಟಿ. ಶಾಂತಳಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




