ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕೇಂದ್ರ ಸಚಿವ ಎ.ನಾರಾಯಣಣಸ್ವಾಮಿ ಚಾಲನೆ

 

ಚಿತ್ರದುರ್ಗ ಕರ್ನಾಟಕ ವಾರ್ತೆ ಸೆಪ್ಟಂಬರ್ 17:
ಚಿತ್ರದುರ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಚಾಲನೆ ನೀಡಿದರು.
ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಎರಡು ದಿನಗಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಪಾರಿವಾಳ ಹಾರಿ ಬಿಡುವ ಮೂಲಕ ಚಾಲನೆ ನೀಡಿದ ಅವರು, ಎರಡು ದಿನಗಳ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಪರಿಚಯ ಮಾಡಿಕೊಂಡು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಕ್ರೀಡಾಕೂಟದಲ್ಲಿ ಕಬ್ಬಡಿ, ಖೋ ಖೋ,  ಥ್ರೋಬಾಲ್, ವಾಲಿಬಾಲ್,  ಉದ್ದ ಜಿಗಿತ, ಎತ್ತರ ಜಿಗಿತ, 100, 200, 400 ಮೀಟರ್ ಹಾಗೂ 1500 ಮೀಟರ್ ಓಟದ ಸ್ಪರ್ಧೆಗಳು ನಡೆದವು.
ದಸರಾ ಕ್ರೀಡಾಕೂಟವು ನಮ್ಮ ಕ್ರೀಡಾ ಪ್ರತಿಭೆ ಅನಾವರಣ ಮಾಡುವುದಕ್ಕೆ ಉತ್ತಮ ವೇದಿಕೆ. ಕ್ರೀಡೆ ನಮ್ಮ ದೈಹಿಕ ಹಾಗೂ ಮಾನಸಿಕ ಸ್ಥಿತಿ ಸಧೃಢಗೊಳ್ಳುವಂತೆ ಮಾಡುತ್ತದೆ. ಇಂತಹ ಕ್ರೀಡೆಗಳ ಆಯೋಜನೆ ತುಂಬಾ ಸಂತೋಷದಾಯಕವಾಗಿದೆ ಎಂದು ಕ್ರೀಡಾಪಟು ಡಿ. ಭಾರತಿ ಅಭಿಪ್ರಾಯ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಆರ್.ಜಯಲಕ್ಷ್ಮೀಬಾಯಿ, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ವಾಲಿಬಾಲ್ ತರಬೇತುದಾರ ಮಹಮ್ಮದ್ ಮುಹೀಬುಲ್ಲಾ ಹಾಗೂ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಇದ್ದರು.

[t4b-ticker]

You May Also Like

More From Author

+ There are no comments

Add yours