ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಚ್.ಎಂ.ಡಿ. ನವಾಜ್ ತಮ್ಮ ವಿರುದ್ಧ ಪ್ರಕಟವಾಗಿರುವ ಮಾನಹಾನಿಕರ ಆನ್ಲೈನ್ ಬರಹಗಳನ್ನು ತೆಗೆದುಹಾಕುವಂತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. 2015 ಮತ್ತು 2020ರಲ್ಲಿ ಪ್ರಕಟವಾದ ಸುಳ್ಳು ಸುದ್ದಿಗಳಿಂದ ಘನತೆಗೆ ಧಕ್ಕೆ ಎಂದು ಆರೋಪಿಸಿದ್ದಾರೆ. ಹಿತಾಸಕ್ತಿ ಸಂಘರ್ಷ ತಪ್ಪಿಸಲು ಭಾರತದಲ್ಲಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಗೂಗಲ್, ಕೇಂದ್ರ ಸಚಿವಾಲಯ ಸೇರಿದಂತೆ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದೆ.





