ಫೆ.24ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

 

ಚಿತ್ರದುರ್ಗ: ಚಿತ್ರದುರ್ಗ  ಗರದ ಹೊಳಲ್ಕೆರೆ ರಸ್ತೆಯ ಶಾರದಮ್ಮ ಆರ್.ಎಸ್.ರುದ್ರಪ್ಪ ಕಲ್ಯಾಣ ಮಂಟಪದ ಪಕ್ಕದಲ್ಲಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಇದೇ ಫೆಬ್ರವರಿ 24ರಂದು ಬಾರತ ಹುಣ್ಣಿಮೆ ಅಂಗವಾಗಿ 77ನೇ ವರ್ಷದ ಶ್ರೀ ರೇಣುಕಾಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಫೆಬ್ರವರಿ 24ರಂದು ಶನಿವಾರ ಶ್ರೀ ರೇಣುಕಾಯಲ್ಲಮ್ಮ ದೇವಿಗೆ (ಜಡೇಯಲ್ಲಮ್ಮ) ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ಪುಷ್ಪ ಅಲಂಕಾರದೊಂದಿಗೆ ವಿಶೇಷ ದರ್ಶನ ಇರಲಿದೆ. ಅಂದು ಶ್ರೀದೇವಿಗೆ ಮಡ್ಲಕ್ಕಿ ಮತ್ತು ಪಡ್ಡಲಿಗೆ ತುಂಬಿಸಿಕೊಳ್ಳಲು ಏರ್ಪಡಿಸಿದೆ.

ಇದನ್ನೂ ಓದಿ: 500ಕ್ಕೂ ಅಧಿಕ ಖಾಸಗಿ ಕಂಪನಿಗಳು ಭಾಗಿ : 1 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ

ಅಂದು ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ಪೂಜೆ ನಡೆಯಲಿದೆ. ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ, ಪ್ರಸಾದ ಸ್ವೀಕರಿಸಿ, ಶ್ರೀದೇವಿ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನದ ಮುಖ್ಯಾಧಿಕಾರಿ ಎಲ್.ತುಕಾರಾಮ ಚವ್ಹಾಣ್ ತಿಳಿಸಿದ್ದಾರೆ.

 

[t4b-ticker]

You May Also Like

More From Author

+ There are no comments

Add yours