ಜ.15ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ: ಅರ್ಥಪೂರ್ಣ ಆಚರಣೆಗೆ ನಿರ್ಧಾರ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ09:
ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಇದೇ ಜನವರಿ 15ರಂದು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆ ವತಿಯಿಂದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಲಾಗುವುದು. ಜಯಂತಿ ಆಚರಣೆ ಸಂಬಂಧ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಚರ್ಚಿಸಲಾಯಿತು.
ಜಿಲ್ಲಾ ಭೋವಿ ಸಮಾಜದ ಮುಖಂಡ ಡಿ.ಸಿ.ಮೋಹನ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕೋವಿಡ್‍ನಿಂದಾಗಿ ಸರಳವಾಗಿ ಸಿದ್ದರಾಮೇಶ್ವರ ಜಯಂತಿ ಆಚರಿಸಲಾಗಿದ್ದು, ಈ ಬಾರಿ ಸಮಾಜದ ವತಿಯಿಂದ 2023ರ ಫೆಬ್ರವರಿ 9ರಂದು ಚಿತ್ರದುರ್ಗ ನಗರದಲ್ಲಿ ಅದ್ದೂರಿಯಾಗಿ ರಾಜ್ಯಮಟ್ಟದ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ ಹಾಗೂ ಮಂಜರಿ ಹನುಮಂತಪ್ಪ ಸ್ಮರಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ ಅವರು, ಜನವರಿ 15ರಂದು ಸರ್ಕಾರದ ವತಿಯಿಂದ ಆಚರಿಸುವ ಸಿದ್ದರಾಮೇಶ್ವರ ಜಯಂತಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಭೋವಿ ಸಮಾಜದ ಮುಖಂಡ ಚಂದ್ರು ಮಾತನಾಡಿ, ಸರ್ಕಾರದ ವತಿಯಿಂದ ಆಚರಿಸುವ  ಶ್ರಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಕಾರ್ಯದರ್ಶಿ ಲಕ್ಷ್ಮಣ್, ನಿರ್ದೇಶಕರಾದ ತಿಮ್ಮಣ್ಣ, ಎಸ್.ಎ.ಸ್ವಾಮಿ, ಭೋವಿ ಗುರುಪೀಠದ ಸಿಇಒ ಗೌನಹಳ್ಳಿ ಗೋವಿಂದಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours