ಎಸ್‍ಎಸ್‍ಎಲ್‍ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್27:
ಇದೇ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಿಮಿತ್ತ ಚಿತ್ರದುರ್ಗ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಆದೇಶಿಸಿದ್ದಾರೆ.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಚಿತ್ರದುರ್ಗ ತಾಲ್ಲೂಕಿನ-29, ಚಳ್ಳಕೆರೆ-21, ಮೊಳಕಾಲ್ಮುರು-8, ಹಿರಿಯೂರು-16, ಹೊಳಲ್ಕೆರೆ-12 ಹಾಗೂ ಹೊಸದುರ್ಗ ತಾಲ್ಲೂಕಿನ 12 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 98 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು,  ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರದ ವ್ಯಾಪ್ತಿಯ 200 ಮೀಟರ್ ಸುತ್ತ ಸಿ.ಆರ್.ಪಿ.ಸಿ ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನಾಂಕಗಳಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್‍ಗಳನ್ನು ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours