ಕರ್ನಾಟಕದ ಎಸ್ಎಸ್ಎಲ್ಸಿ (SSLC) ಫಲಿತಾಂಶದಲ್ಲಿ ಹಿಂದಿ ವಿಷಯದ ಅಂಕಗಳನ್ನು ಒಟ್ಟು ಅಂಕಗಳ ಪಟ್ಟಿಗೆ ಪರಿಗಣಿಸಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸದೆ, ಕೇವಲ ಗ್ರೇಡ್ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ. ಕಳೆದ 27 ವರ್ಷದಿಂದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೆ ತರಬೇಕೆಂದು ಸತತ ಚಳವಳಿ ನಡೆಸುತ್ತ ಬಂದಿದೆ. ದ್ವಿಭಾಷಾ ಶಿಕ್ಷಣ ನೀತಿಯ ಮೊದಲ ಹೆಜ್ಜೆಯಾಗಿ ರಾಜ್ಯ ಸರ್ಕಾರ ಮೂರನೇ ಭಾಷೆ ಹಿಂದಿಗೆ ಗ್ರೇಡ್ ನೀಡುವ ವ್ಯವಸ್ಥೆ ಜಾರಿಗೊಳಿಸುತ್ತಿದೆ.





