ಬೆಂಗಳೂರು, ಫೆ.13: ಕರ್ನಾಟಕ ಸಾರಿಗೆ ಬಸ್ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರತಿನಿತ್ಯ ಲಕ್ಷಾಂತರ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಈಗ ಆಧಾರ್ ಬದಲಿಗೆ ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜತೆಗೆ, ಹಲವು ಮತ್ವದ ನಿರ್ಣಯಗಳನ್ನು ಕ್ಯಾಬಿನೆಟ್ನಲ್ಲಿ ಕೈಗೊಳ್ಳಲಾಗಿದೆ.
ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳು ಸ್ಮಾರ್ಟ್ಕಾರ್ಡ್ ವಿತರಿಸಲಿವೆ. ಶಕ್ತಿ ಸ್ಮಾರ್ಟ್ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರೊಂದಿಗೆ, ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸುವುದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.





