ಮಂಗಳೂರು: ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ)ದ ಪದಾಧಿಕಾರಿಗಳ ಆಯ್ಕೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಂಗಳೂರು ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ವಿಠಲ ಎ. ಅವರನ್ನು ಸಚಿವ ಯು.ಟಿ. ಖಾದರ್ ಅಭಿನಂದಿಸಿ ಸನ್ಮಾನಿಸಿದರು.
ವಿಠಲ್ ಎ. ಅವರು ರಾಜ್ಯ ಸಂಘದ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಯು.ಟಿ. ಖಾದರ್ ಅವರೊಂದಿಗೆ ನಿಕಟಸಂಪರ್ಕ ಹೊಂದಿದ್ದ ಅವರನ್ನು ಸಚಿವರು ಈ ಸಂದರ್ಭದಲ್ಲಿ ಗುರುತಿಸಿ ಗೌರವಿಸಿದರು.





