ಮಂಗಳೂರು, ನ.16: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಡೆಯುವ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ನೀಡಲಾಗುವ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.




ಪ್ರಶಸ್ತಿಗೆ ಪಿ.ಬಿ.ಹರೀಶ್ ರೈ ಅವರನ್ನು ಆಯ್ಕೆ ಮಾಡಿರುವುದಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ನವೆಂಬರ್ 20ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.

