ನಿಗಮ‌ ಮಂಡಳಿ ನಾಮನಿರ್ದೇನ ರದ್ದು, ಹೊಸಬರಿಗೆ ಅವಕಾಶ ಸಾಧ್ಯತೆ.

 

 

 

 

ಬೆಂಗಳೂರು: ರಾಜ್ಯದ ಎಲ್ಲಾ ನಿಗಮ, ಮಂಡಳಿ,‌ ಪ್ರಾಧಿಕಾರ ಅಧ್ಯಕ್ಷರ ಮತ್ತು ಉಪಾಧ್ಯಕ್ಷರುಗಳ ನಾಮನಿರ್ದೇಶನವನ್ನು ಇಂದೇ ಜಾರಿಗೆ ಬರುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.

ಮುಂಬರುವ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡಿರುವ ಆಡಳಿತಾರೂಢ ಬಿಜೆಪಿ ಹೊಸ ನಿಗಮಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ನೇಮಕ ಮಾಡಲು ಮುಂದಾಗಿದೆ. ಅಧಿಕಾರದ ರುಚಿ ಅನುಭವಿಸಿರುವ 47 ನಿಗಮ ಮಂಡಳಿ ಅಧ್ಯಕ್ಷರಿಗೆ ಕೋಕ್ ನೀಡಿ ಕೆಲವರನ್ನು ಮಾತ್ರ ಮುಂದುವರೆಸುವ ಸಾಧ್ಯತೆ ಇದೆ.

ಒಂದಿಲ್ಲೊಂದು ಕಾರಣಗಳಿಂದ ಮುಂದೂಡುತ್ತಲೇ ಬಂದಿದ್ದ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಒತ್ತಡ ಹೆಚ್ಚಾಗಿದ್ದರಿಂದ ಕಳೆದ ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲವು ಹಿರಿಯ ಸಚಿವರು ಹಾಗೂ ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ.

 

 

ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ ನೇಮಕಗೊಂಡಿದ್ದ ಕೆಲವು ನಿಗಮ ಮಂಡಳಿ ಅಧ್ಯಕ್ಷರು/ಉಪಾಧ್ಯಕ್ಷರಿಗೆ ಕೋಕ್ ನೀಡಿ ಶಾಸಕರು ಹಾಗೂ ಮಾಜಿ ಶಾಸಕರಿಗೆ ನೀಡಿದ್ದ ಸ್ಥಾನವನ್ನು ಉಳಿಸಿಕೊಳ್ಳಬೇಕೆಂಬ ನಿರ್ಧಾರಕ್ಕೆ ಬರಲಾಗಿದೆ.

ಬಿಬಿಎಂಪಿ, ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿಳಂಬ ಮಾಡದಂತೆ ಪಕ್ಷ ನಿಷ್ಠರು, ಸಂಘ ಪರಿವಾರ, ಜಾತಿ, ಪ್ರದೇಶವಾರು, ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ನೇಮಕ ಮಾಡಬೇಕೆಂಬ ಸೂಚನೆಯನ್ನು ಪಕ್ಷದ ವರಿಷ್ಠರು ಸಿಎಂಗೆ ನೀಡಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours