ಸಚಿವ ಉಮೇಶ್ ಕತ್ತಿ ಹೃದಯಘಾತದಿಂದ ನಿಧನ

 

 

 

 

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಇಂದು ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

 

 

ಸಚಿವ ಉಮೇಶ್ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ನಾಳೆ ಬೆಳಗ್ಗೆ ಬೆಳಗಾವಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ತಿಳಿದು ಬಂದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ 1961ರ ಮಾರ್ಚ್‌ 14ರಂದು ಜನಿಸಿದ್ದ ಉಮೇಶ್‌ ಕತ್ತಿ ಅವರು ಪತ್ನಿ ಶೀಲಾ, ಮಗ ನಿಖಿಲ್‌, ಮಗಳು ಸ್ನೇಹಾ ಅವರನ್ನು ಅಗಲಿದ್ದಾರೆ

[t4b-ticker]

You May Also Like

More From Author

+ There are no comments

Add yours