ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕೆ ಪುನರ್ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ,ಆ.12:  ಚಿತ್ರದುರ್ಗ ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ , ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀ ಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 2020-21 ನೇ ಸಾಲಿಗೆ 6 ನೇ ತರಗತಿ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.  ಕೋವಿಡ್ ಹಿನ್ನೆಲೆಯಲ್ಲಿನ ಪ್ರವೇಶ ಪರೀಕ್ಷೆಯ ಅರ್ಜಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿದ್ಯಾರ್ಥಿಗಳ ಮತ್ತು ಪೋಷಕರ ಹಿತದೃಷ್ಟಿಯಿಂದ ಆಗಸ್ಟ್ 11 ರಿಂದ ಪನಃ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.  ಆಸಕ್ತ ಪೋಷಕರು ವಿದ್ಯಾರ್ಥಿಯ ಸಂಖ್ಯೆ,  ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಾರ್ಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ವಿಶೇಷ ವರ್ಗಕ್ಕೆ ಸೇರಿದ್ದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರಗಳೊಂದಿಗೆ ತಮಗೆ ಸಮೀಪದ ಅರ್ಜಿ ಸ್ವೀಕೃತಿ ಕೇಂದ್ರಗಳಿಗೆ ಕಚೇರಿ  ಸಮಯದಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಸಲು ಆಗಸ್ಟ್ 25 ರಂದು ಕೊನೆ ದಿನವಾಗಿದೆ.  ಜಿಲ್ಲೆಯಲ್ಲಿ ಕ್ವಾರಂಟೈನ್ ಸೆಂಟರ್, ಕೋವಿಡ್ ಕೇರ್ ಸೆಂಟರ್ ಗಳಾಗಿ ಬಳಸಲಾತ್ತಿರುವ ಹಿರಿಯೂರು ತಾಲ್ಲೂಕು ವ್ಯಾಪ್ತಿಯ  ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಂಕೀರ್ಣ, ದೇವರಕೊಟ್ಟ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಐಮಂಗಲ. ಹೊಳಲ್ಕೆರೆ ತಾಲ್ಲೂಕಿನ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬೊಮ್ಮನಕಟ್ಟೆ. ಹೊಸದುರ್ಗ ತಾಲ್ಲೂಕಿನ ನೀರಗುಂದದ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅರ್ಜಿ ಸಲ್ಲಿಸಲು ಬರುವ ಪೋಷಕರು ಮಾಸ್ಕ್ ಧರಿಸುವುದು  ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಸದಸ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಂಜುಳಮ್ಮ ತಿಳಿಸಿದ್ದಾರೆ

 

 

[t4b-ticker]

You May Also Like

More From Author

+ There are no comments

Add yours