ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದು -ಉಪನಿರ್ದೇಶಕ ಆರ್. ಪುಟ್ಟಸ್ವಾಮಿ

 

ಚಿತ್ರದುರ್ಗ:ಪ್ರತಿಯೊಬ್ಬರೂ ತಮ್ಮ ಜೀವನವನ್ನು ರೂಪಿಸಿಕೊಳ್ಳುವುದಕ್ಕೆ ಶಿಕ್ಷಣ ಅತ್ಯಮೂಲ್ಯವಾದದ್ದು, ಹೀಗಾಗಿ ಶಿಕ್ಷಣದಿಂದ ಯಾರೂ ಕೂಡ ವಂಚಿತರಾಗದೆ ಉತ್ತಮವಾದ ಶಿಕ್ಷಣ ಪಡೆದು ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಆರ್. ಪುಟ್ಟಸ್ವಾಮಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಕ್ರೀಡೆ, ಸಾಂಸ್ಕøತಿಕ, ರೋವರ್ಸ್ ಹಾಗೂ ಎನ್‍ಎಸ್‍ಎಸ್ ಘಟಕಗಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ವ್ಯಕ್ತಿತ್ವ ಮತ್ತು ಜೀವನವನ್ನು ನಿರ್ಧರಿಸುವಂತಹ ಶಿಕ್ಷಣವನ್ನು ನಾವು ಪಡೆಯಬೇಕು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗಬೇಕು. ಸರ್ಕಾರಿ ಶಾಲಾ ಕಾಲೇಜುಗಳಲ್ಲಿಯೇ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ನೀಡಲಾಗುತ್ತಿದೆ.  ಸರ್ಕಾರದಿಂದ ನೀಡುವಂತಹ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಶಿಕ್ಷಣ ಒಂದೇ ಮನುಷ್ಯನನ್ನು ಬದಲಾವಣೆ ಮಾಡುವಂತಹದ್ದು, ವಿದ್ಯಾರ್ಥಿಗಳ ಜೀವನದಲ್ಲಿ ಕಷ್ಟ ಪಟ್ಟರೆ ಮುಂದಿನ ಜೀವನ ಉಜ್ವಲವಾಗಿರುತ್ತದೆ. ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಮನೋಭಾವವನ್ನು ಬೆಳಸಿಕೊಳ್ಳಬೇಕು, ದುರಭ್ಯಾಸಗಳಿಂದ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬಾರದು, ಒಳ್ಳೆಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ತಂದೆ ತಾಯಿಗಳಿಗೆ ಹಾಗೂ ಸಮಾಜಕ್ಕೆ, ಶಿಕ್ಷಕರಿಗೆ ಒಳ್ಳೆಯ ಹೆಸರು ತರಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಹೆಚ್.ಬಿ. ನರಸಿಂಹಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅನೇಕ ಪ್ರತಿಭೆಗಳು ಇದ್ದು ಅವುಗಳನ್ನು ಹೊರತೆಗೆಯುವುದೇ ಈ ಸಾಂಸ್ಕøತಿಕ ಕಾರ್ಯಕ್ರಮದ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು.  ವಿದ್ಯಾರ್ಥಿಗಳಲ್ಲಿ ಭಯ, ಸಂಕೋಚ, ಕೀಳರಿಮೆ, ಹಿಂಜರಿಕೆ ಇರಬಾರದು.  ಗ್ರಾಮೀಣ ಭಾಗದ ವಿದ್ಯಾರ್ಥಿಗಳು  ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ, ಉತ್ತಮ ವಿಚಾರ, ಉತ್ತಮ ನಡವಳಿಕೆ, ಉತ್ತಮ ಹವ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಬರಬೇಕು. ಪ್ರತಿಭಾವಂತ ಶಿಕ್ಷಕರು ನಮ್ಮ ಕಾಲೇಜಿನಲ್ಲಿ ಇದ್ದಾರೆ ಇವರನ್ನು ಸದುಪಯೋಗ ಪಡೆದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಚಳ್ಳಕೆರೆ ಹಿರಿಯ ಸಾಹಿತಿ ತಿಪ್ಪಣ್ಣ ಬಿ. ಮರಿಕುಂಟೆ ಉಪನ್ಯಾಸ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಪ್ರತಿ ಹಂತದಲ್ಲೂ ಕೂಡ ಕಷ್ಟ ಪಟ್ಟರೆ ದೊಡ್ಡ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯ. ಆದ್ದರಿಂದ ಹೊಸ ಹೊಸ ಅಧ್ಯಯನಗಳನ್ನು ಕಲಿಯಬೇಕು.  ನಮ್ಮ ಬದುಕನ್ನು ರೂಪಿಸಿಕೊಳ್ಳುವ ಹಂತದಲ್ಲಿ ಎಚ್ಚರದಿಂದ ಇರಬೇಕು. ಪ್ರಶ್ನೆಗಳಿಗೆ ಉತ್ತರ ಹುಡುಕುವ ವರೆಗೂ ನಿಮ್ಮ ಆಸಕ್ತಿಗಳನ್ನು ಕಳೆದುಕೊಳ್ಳಬಾರದು ವಿದ್ಯಾರ್ಥಿಗಳಿಗೆ ಕೇಳುವ ಆಸಕ್ತಿ ಇರಬೇಕು. ಗುರಿ  ಮತ್ತು ಉದ್ದೇಶವನ್ನು ಇಟ್ಟುಕೊಂಡು ಮುಂದೆ ನಡೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ 2022-23ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ  ಡಿ.ಎಸ್.ಸಿದ್ದೇಶ್, ಇ.ಟಿ.ನಿತಿನ್, ಆರ್.ವಿ.ಸಂಗೀತ, ಟಿ.ಪಿ.ಪಾಲಯ್ಯ, ಬಿ.ಎಸ್.ರಂಗನಾಥ್, ಎನ್.ಎಂ ರವಿಕುಮಾರ್, ಆರ್.ವಿ.ಚಂದನ, ಎಂ.ಪ್ರಜ್ವಲ್, ಎನ್.ಪ್ರಿಯಾಂಕ ಇವರುಗಳಿಗೆ  ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ಡಾ. ಬಿ.ಕೃಷ್ಣಪ್ಪ, ಎನ್.ದೊಡ್ಡಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ನಿರ್ದೇಶಕ ಡಾ. ಜೆ.ಮೋಹನ್, ಪ್ರೌಢಶಾಲಾ ವಿಭಾಗದ ಮುಖ್ಯಸ್ಥ ಮಹಮದ್ ಜಕಾವುಲ್ಲಾ, ಕನ್ನಡ ಉಪನ್ಯಾಸಕ ಗುರುನಾಥ, ಉಪನ್ಯಾಸಕಿ ಆರ್. ಚಂಪಕಲಾ ಸೇರಿದಂತೆ  ಕಾಲೇಜಿನ ಬೋಧಕ ಬೋಧಕೇತರು ಹಾಗೂ ವಿದ್ಯಾರ್ಥಿಗಳು ಇದ್ದರು.
[t4b-ticker]

You May Also Like

More From Author

+ There are no comments

Add yours