ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿ, ಸಮಯ ಸದುಪಯೋಗಪಡಿಸಿಕೊಳ್ಳಿ:ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.31:
ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಅಲಂಕರಿಸಬೇಕು.  ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿ ಸಮಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಹೇಳಿದರು.
ಇಲ್ಲಿನ ಮಹಾರಾಣಿ ಪ್ರೌಢಶಾಲೆಯ ವಾಲ್ಮೀಕಿ ಸಭಾಂಗಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮ ಪಡಿಸಲು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕಲಿಕೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಬೇಕು ಎಂದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮ ಪಡಿಸಲು ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ವಿದ್ಯಾರ್ಥಿಗಳು ಡಾ.ಎಪಿಜೆ ಅಬ್ದುಲ್ ಕಲಾಂ ಅವರನ್ನು ಆದರ್ಶವಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾಧಿಕಾರಿ ಎನ್.ಆರ್. ತಿಪ್ಪೇಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಅಧ್ಯಯನದಲ್ಲಿ ತೊಡಗಿ ಜಿಲ್ಲೆಗೆ ಉತ್ತಮ ಫಲಿತಾಂಶವನ್ನು ತಂದುಕೊಡಬೇಕು ಎಂದರು.
ವಿದ್ಯಾಧಿಕಾರಿ ಮಂಜುನಾಥ್, ಓದಿನ ಮಹತ್ವ, ಓದಿನ ಸರಳ ಸೂತ್ರಗಳ ಬಗ್ಗೆ ತಿಳಿಸಿ, ಓದಿದ್ದನ್ನು ಯಾವ ರೀತಿ ಚಿಂತನೆ ಮಂಥನ ಮಾಡಿಕೊಳ್ಳಬೇಕು ಎಂದು ತಿಳಿಸಿಕೊಟ್ಟರು.
ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಮುಖ್ಯ ಶಿಕ್ಷಕ ಡಾ.ಕೆ.ಎನ್.ಮಹೇಶ್, ಬಸ್ವಂತ್ ಕುಮಾರ್ ಸಂವಾದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಹೇಗೆ ಪಡೆಯಬೇಕು ಎಂಬುವುದರ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಶಿವಣ್ಣ, ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಇದ್ದರು.

[t4b-ticker]

You May Also Like

More From Author

+ There are no comments

Add yours