ಹನಿ ನೀರಾವರಿ ಅಳವಡಿಕೆಗೆ ಸಹಾಯಧನ: ಅರ್ಜಿ ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಡಿ.13:
2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ (ಅಡಿಕೆ ಬೆಳೆ ಹೊರತುಪಡಿಸಿ) ಹನಿ ನೀರಾವರಿ (Drip irrigation)ಪದ್ದತಿ ಅಳವಡಿಸಿಕೊಳ್ಳುವ  ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ  ಶೇ.90ರ ಸಹಾಯಧನ, ಇತರೆ ವರ್ಗ  ರೈತರಿಗೆ ಶೇ.75ರ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: 150 ರೂಪಾಯಿ ಸಾಲದ ಜಗಳ ಕೊಲೆಯಲ್ಲಿ ಅಂತ್ಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಈ ಹಿಂದೆ ಅಂದರೆ 7 ವರ್ಷಗಳ ಹಿಂದೆ ಸಹಾಯಧನ ಪಡೆದ ಫಲಾನುಭವಿಗಳು ಪುನಃ ಅರ್ಜಿಗಳನ್ನು ಸಲ್ಲಿಸಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಭೇಟಿ ಮಾಡಿ ಅವಶ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು  ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours