ಬೇಸಿಗೆ ಶಿಬಿರ ಮಕ್ಕಳ ಜ್ಞಾನಾರ್ಜನೆಗೆ ಬುನಾದಿ: ಎಂ.ಎಸ್.ದಿವಾಕರ್

 

ಬೇಸಿಗೆ ಶಿಬಿರ ಸಮಾರೋಪ ಸಮಾರಂಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ದಿವಾಕರ್
ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ.29:
ಬೇಸಿಗೆ ಶಿಬಿರ ಮಕ್ಕಳ ಜ್ಞಾನದ ಬುನಾದಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಬಾಲಭವನ ಸಮಿತಿ ಅಧ್ಯಕ್ಷ ಎಂ.ಎಸ್.ದಿವಾಕರ ಹೇಳಿದರು.
ಇಲ್ಲಿನ ಜಿಲ್ಲಾ ಬಾಲಭವನ ಆವರಣದಲ್ಲಿ ಸೋಮವಾರ ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಕ್ಕಳು ರಜೆ ದಿನಗಳನ್ನು ಶಿಬಿರದಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಕಲಿಯಲು ಆಸಕ್ತಿ ವಹಿಸಬೇಕು. ರಜೆಯ ದಿನಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಬಿರಗಳು ವಿದ್ಯಾಭ್ಯಾಸಕ್ಕೆ ಪೂರಕವಾಗುತ್ತವೆ ಎಂದು ಹೇಳಿದರು.  ಒಳ್ಳೆಯ ನಡೆ ಮತ್ತು ನುಡಿಯನ್ನು ಶಿಬಿರಗಳು ಕಳಿಸುತ್ತವೆ. ಬೇಸಿಗೆ ರಜೆ ಮುಕ್ತಾಯಗೊಂಡು ಶಾಲೆಗಳು ಪ್ರಾರಂಭಗೊಂಡಿವೆ. ಪ್ರೌಢಶಾಲೆ ವಿಭಾಗದ ಮಕ್ಕಳು ಅತಿ ಹೆಚ್ಚು  ಓದಿನ ಕಡೆ ಆಸಕ್ತಿವಹಿಸಬೇಕು.  ಆಸಕ್ತಿಯಿಂದ ಓದಿ ಉತ್ತಮ ಫಲಿತಾಂಶ ನೀಡಬೇಕು. ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಇಂದು ಕಲೆಗೆ ಉತ್ತಮ ಬೆಲೆ ಸಿಗುತ್ತದೆ. ಅನೇಕ ರಿಯಾಲಿಟಿ ಶೋಗಳಲ್ಲಿಯೂ ಸಹ ಮಕ್ಕಳ ಪ್ರತಿಭೆಯನ್ನು ಪ್ರದರ್ಶನ ಮಾಡಲು ಅವಕಾಶಗಳಿವೆ. ಮಕ್ಕಳ ಬೇಸಿಗೆ ಶಿಬಿರವು ಮಕ್ಕಳಲ್ಲಿರುವ ಕಲೆಯನ್ನು ಗುರುತಿಸಿ ಪರಿಪೂರ್ಣ ರೂಪವನ್ನು ನೀಡುತ್ತದೆ. ಆದ್ದರಿಂದ ಶಿಬಿರಗಳಲ್ಲಿ ಕಲಿತ ಕಲೆಯನ್ನು ಕರಗತ ಮಾಡಿಕೊಂಡು ಮುಂದಿನ ಜೀವನಶೈಲಿಗೆ ಅಳವಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ಬಾಲ ಭವನ ಸಮಿತಿ ವತಿಯಿಂದ ಪ್ರತಿ ವರ್ಷವೂ ಸಹ ಬೇಸಿಗೆ ಶಿಬಿರ ಹಮ್ಮಿಕೊಂಡು ಪಠ್ಯೇತರ ಚಟುವಟಿಕೆಗಳೊಂದಿಗೆ ಪಠ್ಯಕ್ಕೆ ಪೂರಕವಾದ ಚಟುವಟಿಕೆಗಳನ್ನು ಸಹ ಹಮ್ಮಿಕೊಳ್ಳಲಾಗುತ್ತದೆ. ಈ ಶಿಬಿರದ ವಿಶೇಷವೆಂದರೆ ಪೆÇಲೀಸ್ ಠಾಣೆಗೆ ಭೇಟಿ ಹಾಗೂ ಅಗ್ನಿಶಾಮಕ ದಳದ ಪ್ರಾತ್ಯಕ್ಷಿತೆ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿರುತ್ತವೆ. ಮಕ್ಕಳ ಮುಂದಿನ ವಿದ್ಯಾಭ್ಯಾಸವು ಸುಗಮವಾಗಲು ಸಹಕಾರಿಯಾಗುತ್ತವೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಬಾಲಭವನ ಸಮಿತಿ ಅಧ್ಯಕ್ಷ ಎಂ.ಎಸ್.ದಿವಾಕರ ಅವರು ಮಕ್ಕಳೊಂದಿಗೆ ಶಿಬಿರದ ಅನಿಸಿಕೆ ಅಭಿಪ್ರಾಯ ಚರ್ಚಿಸಿ ಸಂವಾದ ಮಾಡಿದರು. ಬೇಸಿಗೆ ಶಿಬಿರದಲ್ಲಿ ತಯಾರಾಗಿದ್ದ ಕರಕುಶಲತೆ ಚಿತ್ರಕಲೆಯ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ನಿರೂಪಣಾಧಿಕಾರಿಗಳಾದ ಕೆಂಪಹನುಮಯ್ಯ ಅವರು ಸ್ವಾಗತಿಸಿ ಪ್ರಾಸ್ತವಿಕ ನುಡಿಗಳನ್ನಾಡಿದರು. ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಸಹ ಪ್ರದರ್ಶನ ಗೊಳಿಸಲಾಯಿತು. ಭಕ್ತಿಗೀತೆಗೆ ಏಕಕಾಲದಲ್ಲಿ ನರ್ತನ ಚಿತ್ರಕಲೆ ಹಾಗೂ ಕರಕುಶಲತೆ ಪ್ರದರ್ಶನ ಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ, ಬಾಲಕಿಯರ ಬಾಲಮಂದಿರದ  ಅಧೀಕ್ಷಕಿ ಸುನಿತಾ, ಸಂಪನ್ಮೂಲ ವ್ಯಕ್ತಿಗಳಾದ ಕೆ ಪವಿತ್ರ. ಅನಿತಾ ಮಹಾಂತೇಶ್. ಜಯಶೀಲ ವಿಶ್ವನಾಥ್, ರಮೇಶ್, ತಿಪ್ಪೇಸ್ವಾಮಿ, ರವಿ ಅಂಬೇಕರ್, ಜಿಲ್ಲಾ ಬಾಲ ಭವನದ ವ್ಯವಸ್ಥಾಪಕರಾದ ರಜಾಕ್ ಸಾಬ್, ಕಾರ್ಯಕ್ರಮ ಸಂಯೋಜಕರಾದ ಡಿ ಶ್ರೀಕುಮಾರ್ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours