ಕಾಂಗ್ರೆಸ್ ಟಿಕೆಟ್ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ನೀಡಲು ಬೆಂಬಲಿಗರ ಆಗ್ರಹ

 

ಚಿತ್ರದುರ್ಗ ಮಾ. ೦೯: ಜೆ ಜೆ ಹಟ್ಟಿ ತಿಪ್ಪೇಸ್ವಾಮಿಗೆ ಟಿಕೆಟ್ ನೀಡಲು ಆಗ್ರಹಿಸಿ ಪ್ರತಿಭಟನೆ ಮೂಲಕ ಜಿಲ್ಲಾ ಕಾಂಗ್ರೆಸ್        (congress) ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.

ಇನ್ನೂ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕೋಟೆನಾಡು ಚಿತ್ರದುರ್ಗದಲ್ಲಿ ಸ್ಥಳೀಯ ಕೂಗು ಎದ್ದಿದ್ದು ಶನಿವಾರ ಸ್ಥಳೀಯರಾದ ಜೆ ಜೆ ಹಟ್ಟಿ ತಿಪ್ಪೇಸ್ವಾಮಿಗೆ ಕಾಂಗ್ರೆಸ್ ಪಕ್ಷ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲು ಆಗ್ರಹಿಸಿ ಸ್ಥಳೀಯ ಮುಖಂಡರು ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಜೆ ಜೆ ಹಟ್ಟಿ ತಿಪ್ಪೇಸ್ವಾಮಿ ಅಭಿಮಾನಿ ಬಳಗದ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಿAದ ಬಂದು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಚೇರಿ ವರೆಗೆ ಬಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್ ಪೀರ್ ಅವರಿಗೆ ಮನವಿಯನ್ನ ಸಲ್ಲಿಕೆ ಮಾಡಿದ್ದಾರೆ.

ಇನ್ನೂ ಕೈನಲ್ಲಿ ಡಿ ಕೆ ಶಿವಕುಮಾರ್, ಸಿ ಎಂ ಸಿದ್ದರಾಮಯ್ಯ ಅವರ ಭಾವಚಿತ್ರಗಳನ್ನ ಕೈನಲ್ಲಿ ಹಿಡಿದ ಪ್ರತಿಭಟನಾಕಾರರು ಡಿ ಕೆ ಶಿವಕುಮಾರ್ ಹಾಗೂ ಸಿ ಎಂ ಸಿದ್ದರಾಮಯ್ಯ ಹಾಗೂ ಜೆ ಜೆ ಹಟ್ಟಿ ತಿಪ್ಪೇಸ್ವಾಮಿ ಅವರ ಪರ ಘೋಷಣೆಗಳನ್ನ ಕೂಗಿ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಆಗ್ರಹ ಮಾಡಿದ್ದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್‌ಪೀರ್ ಅವರಿಗೆ ಮನವಿಯನ್ನ ಸಲ್ಲಿಸಿದ್ದು ಕಾಂಗ್ರೆಸ್ ಸರ್ಕಾರ ಸಿ ಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರು ಈ ಬಾರಿ ಸ್ಥಳೀಯ ಅಭ್ಯರ್ಥಿ ಜೆ ಜೆ ಹಟ್ಟಿ ತಿಪ್ಪೇಸ್ವಾಮಿ ಗೆ ಟಿಕೆಟ್ ನೀಡಿದಲ್ಲಿ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಗೆಲ್ಲುವು ಸಾದಿಸುವುದಾಗಿ ತಿಳಿಸಿದ್ದಾರೆ.

ಕಳೆದ ೧೦ ವರ್ಷಗಳಿಂದ ಹೊರ ಜಿಲ್ಲೆಯವರಿಗೆ ಪಕ್ಷ ಟಿಕೆಟ್ ನೀಡಿದ್ದು ಈ ಬಾರಿ ಸ್ಥಳೀಯ ಸ್ಪರ್ಧಾ ಆಕಾಂಕ್ಷಿಯಾದ ಡಾ. ಬಿ ತಿಪ್ಪೇಸ್ವಾಮಿ ಜೆಜೆ ಹಟ್ಟಿ ಅವರಿಗೆ ಟಿಕೆಟ್ ಕೊಡಿಸಲು ಜಿಲ್ಲಾ ಅಧ್ಯಕ್ಷರು ಜಿಲ್ಲೆಯ ಜನರ ಪರವಾಗಿ ವಿಶೇಷ ಗಮನ ಹರಿಸಿ ಹೈ ಕಮಾಂಡ್ ಗೆ ನಮ್ಮ ಮನವಿಯನ್ನು ಸಲ್ಲಿಸಬೇಕು ಈ ಹಿಂದೆ ೨೦೦೯ ರಲ್ಲಿ ತಿಪ್ಪೇಸ್ವಾಮಿ ಯವರು ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದರು. ಅಲ್ಲಿಂದ ಇಲ್ಲಿಯವರೆಗೆ ತಿಪ್ಪೇಸ್ವಾಮಿ ಯವರು ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾರೆ. ವಿದ್ಯಾರ್ಥಿ ಕಾಂಗ್ರೆಸ್ಸ್, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅನೇಕ ಜನಪರ ಹೋರಾಟ ಮಾಡಿ ಪಕ್ಷದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ…

ಇದನ್ನೂ ಓದಿ: ಚಾಕಲೇಟ್ ಅಂತ ಮಾತ್ರೆ ತಿಂದಿದ್ದ ನಾಲ್ಕು ವರ್ಷದ ಮಗು ಸಾವು

ಕಳೆದ ಒಂದೂವರೆ ವರ್ಷದಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ತಾಲ್ಲೂಕಿನಲ್ಲಿ ಪ್ರತಿಯೊಂದು ಗ್ರಾಮ ಹೋಬಳಿ ಹಾಗೂ ನಗರ ಮಟ್ಟದಲ್ಲಿ ಸಭೆ ಸಮಾರಂಭ ಅನೇಕ ಕಾರ್ಯಕ್ರಮಗಳನ್ನು ಮಾಡಿ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಚಿತ್ರದುರ್ಗದಲ್ಲಿ ಮತದಾರರು ಸ್ಥಳೀಯ ನಾಯಕರ ಆಯ್ಕೆಯಲ್ಲಿ ಬಹಳ ನಿರೀಕ್ಷೆ ಇಟ್ಟಿದ್ದು ಅವರ ಆಶಯಗಳಿಗೆ ಮಾನ್ಯತೆ ನೀಡಿ ಸ್ಥಳೀಯ ನಾಯಕರಿಗೆ ಟಿಕೆಟ್ ಕೊಡಿಸಬೇಕು ಕಳೆದ ಅನೇಕ ವರ್ಷಗಳಿಂದ ಸ್ಥಳೀಯ ನಾಯಕತ್ವಕ್ಕೆ ಜನಾಂದೋಲನ ನಡೆಯುತ್ತಿದ್ದು ಈ ಬಾರಿ ಸ್ಥಳೀಯರಿಗೆ ಟಿಕೆಟ್ ಕೊಟ್ಟು ಈ ಕ್ಷೇತ್ರವನ್ನು ಕಾಂಗ್ರೆಸ್ಸ್ ತೆಕ್ಕೆಗೆ ತೆಗೆದುಕೊಳ್ಳವುತ್ತ ಗಮನ ಹರಿಸಬೇಕೆಂದು ಮನವಿ ಮಾಡಲಾಯಿತು.

[t4b-ticker]

You May Also Like

More From Author

+ There are no comments

Add yours