ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅಧಿಕಾರ ಸ್ವೀಕಾರ

 

ಚಿತ್ರದುರ್ಗ: ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಮಂಗಳವಾರ ಅಧಿಕಾರ ವಹಿಸಿಕೊಂಡರು.

ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ಸೋಮವಾರ ರಾತ್ರಿ ವರ್ಗಾವಣೆಗೊಳಿಸಿ, ಅವರ ಜಾಗಕ್ಕೆ ಟಿ.ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು.

ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು.

2015 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಅವರು ಟಿ.ವೆಂಕಟೇಶ್, ಈ ಮೊದಲು 2006 ರಿಂದ 2010ರವರೆಗೆ ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ, ಆನಂತರ ಹರಪನಹಳ್ಳಿ ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ, ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ, ರಾಜ್ಯ ಪುರಾತತ್ವ ಇಲಾಖೆ ಆಯುಕ್ತರು, ಕೆಎಸ್‍ಆರ್‍ಟಿಸಿ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಹಾಗೂ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು, ಅಲ್ಲದೆ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಅರ್ಹ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಆದ್ಯತೆ ನೀಡಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು.

ಇದನ್ನೂ ಓದಿ: ಶ್ರೀ ಅಹೋಬಲ ಟಿವಿಎಸ್ ಗೆ ಯಶಸ್ವಿ ಎರಡನೇ ವರ್ಷ ಪೂರೈಸಿದ ಸಂಭ್ರಮ

[t4b-ticker]

You May Also Like

More From Author

+ There are no comments

Add yours