ನಿಗದಿತ ಕಾಲಮಿತಿಯಲ್ಲಿ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ವಹಿಸಿ: ಸಚಿವ ಡಿ.ಸುಧಾಕರ್ ಸೂಚನೆ

 

ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ
****************
ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರಕ್ಕೆ ಕ್ರಮವಹಿಸ
ಚಿತ್ರದುರ್ಗ ಸೆ. 25 (ಕರ್ನಾಟಕ ವಾರ್ತೆ) :
ಸಾರ್ವಜನಿಕರು ಸಣ್ಣ ಪುಟ್ಟ ಸಮಸ್ಯೆಗಳನ್ನು ಹೊತ್ತು ಕಚೇರಿಗಳಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಲು ಮುಖ್ಯಮಂತ್ರಿಗಳ ಆಶಯದಂತೆ ಜನತಾದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ನಿಗದಿತ ಕಾಲಮಿತಿಯಲ್ಲಿ ತ್ವರಿತವಾಗಿ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿರಿಯೂರು ನಗರದ ಹುಳಿಯಾರು ರಸ್ತೆಯ ತಾಹಾ ಪ್ಯಾಲೇಸ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಈಗಾಗಲೇ ನಾಲ್ಕು ತಿಂಗಳನ್ನು ಪೂರೈಸಿದೆ. ಆಡಳಿತ ಚುರುಕುಗೊಳಿಸಲು ಜನರ ಸಂಕಷ್ಟಗಳಿಗೆ ಸ್ಪಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ.  ಈ ಹಿನ್ನಲೆಯಲ್ಲಿ ಪ್ರತಿ ತಿಂಗಳು ಜನತಾದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಚಿತ್ರದುರ್ಗ ತಾಲೂಕಿನಲ್ಲಿ 800 ಚಳ್ಳಕೆರೆ-900 ಹಿರಿಯೂರು-950 ಹೊಳಲ್ಕೆರೆ- 1285, ಹೊಸದುರ್ಗ -1441, ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 1530 ಪೌತಿ ಖಾತೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 6500 ಕ್ಕೂ ಹೆಚ್ಚು ಪೌತಿ ಖಾತೆಗಳು ಆಗಬೇಕಿದೆ. ಅಕ್ಟೋಬರ್ 31 ರ ಒಳಗೆ ಈ ಪೌತಿ ಖಾತೆಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಕಂದಾಯ ಇಲಾಖೆ ವತಿಯಿಂದ ಆಂದೋಲನ ಹಮ್ಮಿಕೊಳ್ಳಲಾಗಿದೆ. ಕಾಲಮಿತಿಯೊಳಗೆ ಈ ಪೌತಿ ಖಾತೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.
ಯಾವುದೇ ಸಾರ್ವಜನಿಕರು ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ,  ತಹಶೀಲ್ದಾರ್ ಕಚೇರಿಗಳಿಗೆ ಅಲೆದಾಡಬಾರದು. ಜನರಿಗೆ ತೊಂದರೆಯಾಗದಂತೆ ಸಮರ್ಪಕವಾಗಿ ಸರ್ಕಾರದ ಯೋಜನೆ, ಸೌಲಭ್ಯಗಳನ್ನು ತಲುಪಿಸಲು, ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡ್ಯೊಯಲು ಪ್ರಾಮಾಣಿಕವಾಗಿ ಅಧಿಕಾರಿಗಳು ಶ್ರಮಿಸಬೇಕು ಎಂದು ಸಚಿವ ಡಿ ಸುಧಾಕರ್ ಹೇಳಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್. ಜೆ ಮಾತನಾಡಿ, ಸರ್ಕಾರ ಯೋಜನೆಗಳು ಅರ್ಹರಿಗೆ ಸಮರ್ಪಕವಾಗಿ ತಲುಪಿದಾಗ ಮಾತ್ರ ಅವು ಯಶಸ್ವಿಯಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರದ ಹಲವು ಮಹತ್ವಾಕಾಂಕ್ಷೆ ಯೋಜನೆಗಳನ್ನು ಅನಗತ್ಯವಾಗಿ ವಿಳಂಬ ಮಾಡದೇ, ಜನ ಸಾಮಾನ್ಯರನ್ನು ಅಲೆದಾಡಿಸದೇ ತಲುಪಿಸಬೇಕು. ಮನೆಬಾಗಿಲಿಗೆ ಬಂದು ಸಮಸ್ಯೆಗಳನ್ನು ಕೇಳುವ ಮೂಲಕ, ಆ ಸಮಸ್ಯೆಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥ ಪಡಿಸಲು ಜಿಲ್ಲೆಯ ಅಧಿಕಾರಿಗಳು ಶ್ರಮಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ 15 ದಿನಕ್ಕೊಮ್ಮೆ ಒಂದು ತಾಲ್ಲೂಕು ಆಯ್ಕೆ ಮಾಡಿ, ಆ ತಾಲ್ಲೂಕಿನ ಜನಪ್ರತಿನಿಧಿಗಳು, ಅಧಿಕಾರಿಗಳು ಎಲ್ಲರೂ ಸೇರಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗಲಿದೆ ಎಂದರು.
ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಜನಸ್ಪಂದನ-iPಉಖS ಪೆÇೀರ್ಟಲ್ ನಲ್ಲಿ ಅರ್ಜಿ, ದೂರುಗಳನ್ನು ಸ್ವೀಕರಿಸಿ, ಇಲಾಖಾವಾರು ವಿಂಗಡಣೆ ಮಾಡಿ, ಅರ್ಜಿಯ ಸ್ಥಿತಿಗತಿಯ ಬಗ್ಗೆ ತಿಳಿಯಲು ಇದರಿಂದ ಅನುಕೂಲವಾಗಲಿದೆ. ಈ ಅರ್ಜಿಯನ್ನು ಅಧಿಕಾರಿಗಳು ಕಾಲಮಿತಿಯೊಳಗೆ ಇತ್ಯರ್ಥಪಡಿಸಬೇಕು.  ಅರ್ಜಿ ಸಲ್ಲಿಸುವವರ ಮೊಬೈಲ್‍ಗೆ ಅರ್ಜಿ ಸ್ವೀಕೃತಿಯ ಬಗ್ಗೆ ಸಂದೇಶ ಬರುವ ರೀತಿ ವ್ಯವಸ್ಥೆ ಒದಗಿಸಲಾಗಿದೆ. ಹಾಗಾಗಿ ಜನಸಾಮಾನ್ಯರು ಜನತಾ ದರ್ಶನ ಕಾರ್ಯಕ್ರಮವನ್ನು  ಉತ್ತಮ ರೀತಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು. ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಕಾನೂನು ರೀತಿಯಲ್ಲಿ ಕ್ರಮವಹಿಸಲು ಬದ್ಧರಾಗಿದ್ದೇವೆ. ಜನತಾ ದರ್ಶನ ಕಾರ್ಯಕ್ರಮಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅರ್ಜಿಗಳನ್ನು ಆಯಾ ಇಲಾಖಾ ಮುಖ್ಯಸ್ಥರು ನಿಗದಿತ ಸಮಯದೊಳಗೆ ಇತ್ಯರ್ಥಪಡಿಸಲು ಎಲ್ಲ ರೀತಿಯ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜನರಿಗೆ  ಯಾವುದೇ ರೀತಿಯ ತೊಂದರೆಯಾಗದಂತೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಹಾಗೂ ಜನತಾ ದರ್ಶನದಲ್ಲಿ ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸಬೇಕು. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವಂತಾಗಬೇಕು. ಕಂದಾಯ ಇಲಾಖೆಯ ಫೌತಿಖಾತೆಯನ್ನು ಅಂದೋಲನ ರೀತಿಯಲ್ಲಿ  ಕೈಗೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಏಕ ಕಾಲದಲ್ಲಿ ಜನತಾ ದರ್ಶನ ನಡೆಯುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಜಿಲ್ಲೆಯ ನಾಗರಿಕರು ಸರ್ಕಾರದ ಯೋಜನೆಗಳು, ಸೌಲಭ್ಯಗಳು ವಿಳಂಬವಾದ ಸಂದರ್ಭದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಜನತಾ ದರ್ಶನ ಉತ್ತಮ ವೇದಿಕೆಯಾಗಿದೆ. ಗ್ರಾಮೀಣ ಭಾಗದ ಸಾರ್ವಜನಿಕರ ಕುಂದುಕೊರತೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿಯ ಕಚೇರಿಯಲ್ಲಿಯೂ ಕೂಡ ಅಹವಾಲುಗಳನ್ನು ಸಲ್ಲಿಸಬಹುದು.  ಯಾವುದಾದರೂ ಕಚೇರಿಯಲ್ಲಿ ಕಡತ ವಿಲೇವಾರಿ ಆಗದೇ ಬಾಕಿ ಇದ್ದರೆ ಜನತಾ ದರ್ಶನದ ಕೌಂಟರ್ ನಲ್ಲಿ ಅಹವಾಲು ದಾಖಲಿಸಿ, ಸ್ವೀಕೃತಿ ಪಡೆಯಿರಿ ಎಂದು ತಿಳಿಸಿದ ಅವರು, ಸರ್ಕಾರದ ಹಲವು ಯೋಜನೆಗಳನ್ನು ತಿಳಿದುಕೊಳ್ಳುವುದು ಆದ್ಯ ಕರ್ತವ್ಯವಾಗಿದೆ ಎಂದರು.

ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಸೌಲಭ್ಯ ವಿತರಣೆ:
******** ಹಿರಿಯೂರು ನಗರದ ತಾಹಾ ಪ್ಯಾಲೇಸ್‍ನಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸರ್ಕಾರದ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡಿದರು.  ಡಿ.ಎಮ್.ಎಫ್ ನಡಿ ಜಿಲ್ಲಾ ಪಂಚಾಯಿತಿ ಅನುದಾನದಡಿ 8 ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶೂ, ಶೇಕಡಾ ನೂರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಶಾಲೆಗಳಿಗೆ ಪಾರಿತೋಷಕ ಅಭಿನಂದನಾ ಪತ್ರ, ಕಾರ್ಮಿಕ ಇಲಾಖೆ ವತಿಯಿಂದ ನೊಂದಣಿ ಕಾರ್ಡ್, ಲ್ಯಾಪ್ ಟಾಪ್, ಅಂತರ್ಜಾತಿ ವಿವಾಹವಾದವರಿಗೆ ಸಮಾಜ ಕಲ್ಯಾಣ ಇಲಾಖೆ ಪ್ರೋತ್ಸಾಹಧನ, ಕಂದಾಯ ಇಲಾಖೆ 94ಸಿ ಹಕ್ಕು ಪತ್ರ, ವಿವಿಧ ಪಿಂಚಣಿ ಆದೇಶ ಪತ್ರಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಕನ್ಯ ಸಮೃದ್ಧಿ ಬಾಂಡ್‍ಗಳನ್ನು ಸಚಿವ ಡಿ.ಸುಧಾಕರ್ ಫಲಾನುಭವಿಗಳಿಗೆ ವಿತರಿಸಿದರು.
ಅರ್ಜಿ ಸ್ವೀಕಾರಕ್ಕೆ ಕೌಂಟರ್‍ಗಳು :
*******ಸಾರ್ವಜನಿಕರಿಂದ ವಿವಿಧ ಇಲಾಖೆಗಳಿಗೆ ಸಂಬಂದಿಸಿದ ಅಹವಾಲು ಅರ್ಜಿ ಸ್ವೀಕರಿಸಲು, ತಂತ್ರಾಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಸ್ಥಳದಲ್ಲಿ ಗೊಂದಲವಾಗದ ರೀತಿ, ನಾಲ್ಕು ಕೌಂಟರ್ ಗಳನ್ನು ತೆರೆದು ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿತ್ತು, ಅಲ್ಲದೆ ಅರ್ಜಿ ಸಲ್ಲಿಸಿದವರಿಗೆ ಸ್ವೀಕೃತಿ ಪತ್ರಗಳನ್ನು ಕೂಡ ನೀಡಲಾಯಿತು.  ಜನತಾದರ್ಶನಕ್ಕಾಗಿ ಆಗಮಿಸಿದ್ದ ಸಾರ್ವಜನಿಕರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಕೂಡ ಕಲ್ಪಿಸಲಾಗಿತ್ತು.  ಸಾರ್ವಜನಿಕರು ವೇದಿಕೆಗೆ ಆಗಮಿಸಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ತಮ್ಮ ಅಹವಾಲುಗಳನ್ನು ಸಲ್ಲಿಸಿದರು,  ಅಹವಾಲು ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು, ಅಲ್ಲದೆ, ತ್ವರಿತಗತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಜಿಲ್ಲಾಧಿಕಾರಿಗಳಿಗೂ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ  ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ತಾಹಾ ಪ್ಯಾಲೇಸ್ ಆವರಣದಲ್ಲಿ ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಿಂದ ತರೆಯಲಾದ ವಸ್ತು ಪ್ರದರ್ಶನ ಮಳಿಗೆಗಳನ್ನು ಸಚಿವ ಡಿ.ಸುಧಾಕರ್ ಉದ್ಘಾಟನೆ ಮಾಡಿ, ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಿಕೊಟ್ಟರು.
ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಹೆಚ್.ಜೆ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ರಂಗನಾಥ, ಜಿ.ಪಂ. ಉಪಕಾರ್ಯದರ್ಶಿ ತಿಮ್ಮಪ್ಪ, ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಹಿರಿಯೂರು ತಹಶಿಲ್ದಾರ್ ರಾಜೇಶ್ ಕುಮಾರ್ ಸೇರಿದಂತೆ ಜಿಲ್ಲಾ  ಹಾಗೂ ಹಿರಿಯೂರು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಉಪಸ್ಥಿತರಿದ್ದರು.

35 ಫಲಾನುಭವಿಗಳಿಗೆ ಸ್ಥಳದಲ್ಲೇ ಮಾಸಾಶನ ಮಂಜೂರು :
*********** ಸಂಧ್ಯಾಸುರಕ್ಷಾ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ತಮಗೆ ಮಾಸಾಶನ ಮಂಜೂರು ಮಾಡಬೇಕೆಂದು ಜನತಾದರ್ಶನದಲ್ಲಿ ಅರ್ಜಿ ಸಲ್ಲಿಸಿದ ಒಟ್ಟು 35 ಫಲಾನುಭವಿಗಳಿಗೆ ಅಧಿಕಾರಿಗಳು ಮಾಸಾಶನ ಮಂಜೂರು ಮಾಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಇದೇ ಸಂದರ್ಭದಲ್ಲಿ ಮಂಜೂರಾತಿ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಿದರು.

325 ಅರ್ಜಿಗಳು ಸಲ್ಲಿಕೆ :
******** ಜನತಾದರ್ಶನದಲ್ಲಿ ಒಟ್ಟು 325 ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾದವು, ಇವುಗಳಲ್ಲಿ ಪ್ರಮುಖವಾಗಿ ರೈತರಿಂದ ಭೂಮಿ ಸಾಗುವಳಿ ಚೀಟಿ ನೀಡುವುದು, ನಿವೇಶನ, ಮನೆ ಮಂಜೂರಾತಿ, ಗ್ರಾಮಗಳಿಗೆ ಮೂಲಭೂತ ಸೌಕರ್ಯ, ಕುಡಿಯುವ ನೀರು, ಬೋರೆವೆಲ್ ಕೊರೆಯಿಸುವುದು, ಗಂಗಾಕಲ್ಯಾಣ ಯೋಜನೆ, ಟ್ರಾನ್ಸ್‍ಫಾರ್ಮರ್ ದುರಸ್ತಿ, ವಿದ್ಯುತ್ ಲೈನ್ ದುರಸ್ತಿ, ಉದ್ಯೋಗ ಮುಂತಾದ ವಿಷಯಗಳ ಬಗ್ಗೆ ಇದ್ದವು.

ಸಾರ್ವಜನಿಕರ ಅಭಿಪ್ರಾಯ :
***********

ಸೌಭಾಗ್ಯಮ್ಮ, ಇಂಡಿಸ್ ಕಟ್ಟೆ : ನಮಗೆ ಜಮೀನಿದ್ದು, ಬಡವರಾಗಿದ್ದೇವೆ, ಹೀಗಾಗಿ ಗಂಗಾಕಲ್ಯಾಣ ಯೋಜನೆಯಡಿ ಬೋರ್‍ವೆಲ್ ಕೊರೆಯಿಸಿಕೊಡುವಂತೆ ಕೋರಲು ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ, ಯಾರಿಗೆ ಮನವಿ ಕೊಡಬೇಕು ಎಂದು ಗೊತ್ತಿರಲಿಲ್ಲ. ಇದೀಗ ಸರ್ಕಾರದಿಂದ ಜನತಾದರ್ಶನ ಕಾರ್ಯಕ್ರಮ ಆಯೋಜಿಸಿದ್ದು, ಸಚಿವರಿಗೆ ನಮ್ಮ ಅಹವಾಲು ಸಲ್ಲಿಸಲು ಉತ್ತಮ ವೇದಿಕೆ ದೊರೆತಂತಾಗಿದೆ.

ನಾಗರಾಜು, ತಿಗಳಿಕಟ್ಟೆ : ಬಹಳ ವರ್ಷಗಳಿಂದ ನಾವು ಭೂಮಿ ಸಾಗುವಳಿ ಮಾಡುತ್ತಿದ್ದೇವೆ, ಆದರೆ ನಮ್ಮ ಹೆಸರಿಗೆ ಜಮೀನು ಇಲ್ಲ, ಹೀಗಾಗಿ ಸರ್ಕಾರದ ಯಾವುದೇ ಸೌಲಭ್ಯ ಸಿಗುತ್ತಿಲ್ಲ, ಬಡ ರೈತರಾದ ನಾವು, ನಮಗೆ ಜಮೀನು ಮಾಡಿಕೊಡಿ ಎಂದು ಮನವಿ ಸಲ್ಲಿಸಲು ಜನತಾದರ್ಶನಕ್ಕೆ ಬಂದಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಮನವಿಯನ್ನು ಆಲಿಸಿದ್ದಾರೆ, ನಮ್ಮ ಕೋರಿಕೆ ಈಡೇರುವ ಭರವಸೆ ದೊರೆತಿದೆ.

[t4b-ticker]

You May Also Like

More From Author

+ There are no comments

Add yours