ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಅರ್ಜಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 02:
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ “ಪ್ರತಿಭಾ ಪುರಸ್ಕಾರ”ವನ್ನು ಅಯೋಜಿಸುತ್ತಾ ಬಂದಿದ್ದು, 2022ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರದ ಖಾಯಂ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಕೇಂದ್ರ ಸಂಘದಿಂದ  https: //bit.ly/ksgeaprathibapuraskara2022     ವೆಬ್‍ಸೈಟ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿದಾರರ ತಂದೆ-ತಾಯಿ, ಪೋಷಕರು ಕಡ್ಡಾಯವಾಗಿ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. ವೇತನ ಬಟವಾಡೆ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ, ತಾಲ್ಲೂಕು, ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ಸೇವಾ ದೃಢೀಕರಣ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಯ ಪೋಷಕರು ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯ ನೌಕರರಾಗಿದ್ದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಜಿಲ್ಲಾಧ್ಯಕ್ಷರು ಮತ್ತು ತಾಲ್ಲೂಕು ಅಧ್ಯಕ್ಷರಿಂದ ಸೇವಾ ದೃಢೀಕರಣ ಪತ್ರವಿಲ್ಲದೆ ಸಲ್ಲಿಸಲ್ಪಡುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22354783/84, 9902135813ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಂಜುನಾಥ್ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours