ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಕಾವೇರಿ ವಿವಾದ ತಣ್ಣಗಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ನಿರ್ದೇಶನಗಳಂತೆ ತನ್ನ ಪಾಲಿನ ನೀರನ್ನು ಬಿಡುಗಡೆ ಮಾಡಲು ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಇಂದು ಕರ್ನಾಟಕ ರಾಜ್ಯದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ನದಿ ಪ್ರಾಧಿಕಾರಗಳು ಪದೇ ಪದೇ ಸೂಚನೆ ನೀಡಿದ್ದರೂ ಕರ್ನಾಟಕ ಅಗತ್ಯ ಪ್ರಮಾಣದ ಕಾವೇರಿ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಸೂಚನೆಯಂತೆ ಇಂದು ಈ ಅರ್ಜಿ ಸಲ್ಲಿಸಲಾಗಿದೆ.




