ಮಕ್ಕಳಿಗೆ ವಿಶೇಷ ಕಲಿಕಾ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಶಿಕ್ಷಕರು ಸಿದ್ದವಾಗಬೇಕು:ಶಾಸಕ ಟಿ.ರಘುಮೂರ್ತಿ

 

 

 

 

ಚಳ್ಳಕೆರೆ-23: ಶಿಕ್ಷಕ ವರ್ಗ ಮಕ್ಕಳಿಗೆ ವಿಶೇಷ ಕಲಿಕಾ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ  ಮೊದಲು ಶಿಕ್ಷಕರು ತಯರಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

 

ಅವರು, ನಗರದ ಕುವೆಂಪು ಪ್ರೌಢಶಾಲಾ ಸಭಾಂಗಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಸಹ ಪಠ್ಯ ಚುಟುವಟಿಕೆ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

 

 

ವಿದ್ಯಾರ್ಥಿಗಳು ಹಲವಾರು ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಾರೆ. ಅದರಂತೆ ಶಿಕ್ಷಕ ವರ್ಗವೂ ವಿವಿಧ ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆಯಬೇಕು. ಶಿಕ್ಷಕರು ಹೆಚ್ಚು ಓದುವ, ಅಭ್ಯಾಸ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಸಹ ಪಠ್ಯ ಚಟುವಟಿಕೆಗಳನ್ನು ಕಲಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲು ಇಂತಹ ಸ್ಪರ್ಧೆಗಳು ಸಹಕಾರಿಯಾಗುತ್ತದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಮಾತನಾಡಿ, ಶಿಕ್ಷಕರಿಗೆ ಏರ್ಪಡಿಸಿರುವ ಈ ಪಠ್ಯ ಚಟುವಟಿಕೆಯಲ್ಲಿ ಭಾಗವಹಿಸಿದ ಶಿಕ್ಷಕರಲ್ಲಿ 42 ಶಿಕ್ಷಕರು ಸ್ಪರ್ಧೆಯಲ್ಲಿ ಆಯ್ಕೆ ಮಾಡಿ ಶಿಕ್ಷಣ ಕಲ್ಯಾಣ ಇಲಾಖೆ ಬಹುಮಾನ ನೀಡಿ ಪುರಸ್ಕರಿಸಲಿದೆ ಎಂದರು.

ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಮಾರುತೇಶ್, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀರಾಮರೆಡ್ಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಜುಕುಮಾರ್, ಮಹಾಲಿಂಗಪ್ಪ, ಮಾಧವ, ಮಾರುತಿ ಭಂಡಾರಿ, ಗಿರೀಶ್ ಮೊದಲಾದವರು ಇದ್ದರು.

[t4b-ticker]

You May Also Like

More From Author

+ There are no comments

Add yours