ಮಂಗಳೂರು, ಜೂ,16: ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ದಕ್ಷಿಣ ಕನ್ನಡ ( ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ.
ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯನ್ನು ಎಸ್ಐಟಿ ಎಸ್ ಪಿ ಸೈಮನ್ ಅವರು ನಡೆಸುತ್ತಿದ್ದು, ಇದೇ ಪ್ರಕರಣ ಸಂಬಂಧ ಚರ್ಚಿಸಲು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಖಾರಿಯಾಗಿರುವ ಜೀತೇಂದ್ರ ಕುಮಾರ್ ದಯಾಮ ಅವರನ್ನ ಭೇಟಿಯಾಗಿ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಎಸ್ ಐಟಿ ಎಸ್.ಪಿ ಸೈಮನ್ ಇನ್ಸ್ಪೆಕ್ಟರ್ ಕುಸುಮಾಧರ್ , ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಾಗೂ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಾಶತ್ ಸದ್ಯ ಅಪಾಯದಿಂದ ಪಾರಾಗಿದ್ದಾರೆ.



