ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತದ ಪ್ರಭಾವದಿಂದ ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ ಸೇರಿದಂತೆ ೭ ಜಿಲ್ಲೆಗಳು ಮತ್ತು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬಾಗಲಕೋಟೆ, ಬೀದರ್ ಸೇರಿ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ವಿವಿಧ ನಗರಗಳ ಕಷ್ಠ ಮತ್ತು ಗರಿಷ್ಠ ಉಷ್ಣಾಂಶದ ವಿವರವನ್ನೂ ನೀಡಲಾಗಿದೆ.
ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಇಲಾಖೆ ತಿಳಿಸಿದೆ.





