ಸಣ್ಣ ಕೈಗಾರಿಕೆ ಅಭಿವೃದ್ದಿ ನಿಗಮದ ಸೌಲಭ್ಯ ಜನರಿಗೆ ಮುಟ್ಟಿಸುವೆ:ಟಿ.ರಘುಮೂರ್ತಿ

 

ಚಿತ್ರದುರ್ಗ: ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಮಂಡಳಿಯ  ಸೌಲಭ್ಯಗಳನ್ನು ಜನರಿಗೆ ತಲುಪಿಸಿ ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಚಳ್ಳಕೆರೆ ಕ್ಷೇತ್ರದ ಶಾಸಕರು ಮತ್ತು  ಕರ್ನಾಟಕ ರಾಜ್ಯ  ಸಣ್ಣ ಕೈಗಾರಿಕೆಗಳ ಅಭಿವೃದ್ಧಿ  ನಿಗಮ ಮಂಡಳಿ ನೂತನ ಅಧ್ಯಕ್ಷರಾದ ಟಿ.ರಘುಮೂರ್ತಿ ಅವರು ತಿಳಿಸಿದರು.

ಬೆಂಗಳೂರು ನಗರದ ರಾಜಾಜಿನಗರದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ  ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಧಿಕಾರ ಸ್ವೀಕಾರ ಮಾಡಿ ಮಾತನಾಡಿದರು.
ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಮತ್ತು ಸಚಿವರ ಸಹಕಾರ ಪಡೆಯುವ ಮೂಲಕ  ಸಣ್ಣ ಕೈಗಾರಿಕೆ  ಸೌಲಭ್ಯಗಳನ್ನು  ಜನರಿಗೆ ಮಟ್ಟಿಸುವ ಕೆಲಸವನ್ನು ಮಾಡುತ್ತೇನೆ. ಸಣ್ಣ ಕೈಗಾರಿಕೆಗಳ ಬಡವರ ಬದುಕನ್ನು ರೂಪಿಸುತ್ತವೆ. ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ‌ ಜನರ  ಅಭಿವೃದ್ಧಿಗೆ ಸಣ್ಣ ಕೈಗಾರಿಕೆ ನಿಗಮದಲ್ಲಿನ  ಸೌಲಭ್ಯ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತದೆ.
ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದು ಹೆಚ್ಚಿನ ಅನುದಾನ ಪಡೆಯುವ ಮೂಲಕ ಹೆಚ್ಚು ಜನರಿಗೆ ಸಣ್ಣ ಕೈಗಾರಿಕೆ ಸ್ಥಾಪಿಸಲು ಪ್ರೋತ್ಸಾಹ ನೀಡಿದರೆ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ. ಗ್ರಾಮೀಣ ಭಾಗದಲ್ಲಿ  ಸಣ್ಣ ಕೈಗಾರಿಕೆಗಳ ಆರಂಭದಿಂದ  ಯುವಕ ಯುವತಿಯರಿಗೆ ಹೆಚ್ಚು ಅನುಕೂಲವಾಗುತ್ತದೆ. ನಗರ ಪ್ರದೇಶಕ್ಕೆ ಆಗಮಿಸುವವರ ಸಂಖ್ಯೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ. ಇಲಾಖೆಯ ಸಂಪೂರ್ಣ ಮಾಹಿತಿ ಪಡೆಯುವ ಮೂಲಕ ಹಂತ ಹಂತವಾಗಿ ಎಲ್ಲಾ ಸೌಲಭ್ಯ ಒದಗಿಸಲು ಶ್ರಮಸುತ್ತೇನೆ ಎಂದು ಹೇಳಿದರು.
ಸಚಿವರು ,ಮುಖಂಡರ ಮತ್ತು ಕಾರ್ಯಕರ್ತರಿಂದ ಅಭಿನಂದನೆ: ಬೆಂಗಳೂರು ರಾಜಾಜಿನಗರದ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ನಿಗಮ ನಿಯಮಿತ ಕಚೇರಿಯಲ್ಲಿ ಶಾಸಕ‌ ಟಿ.ರಘುಮೂರ್ತಿ ಅಧಿಕಾರಿ ಸ್ವೀಕಾರ ಮತ್ತು ಪೂಜಾ ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಖುದ್ದು ಹಾಜರಿದ್ದರು‌.ನಂತರ  ಶಾಸಕರಾದ , ಕೆ.ಸಿ.ವೀರೇಂದ್ರ ಪಪ್ಪಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಹೆಚ್.ಆಂಜನೇಯ, ಮುಖಂಡರಾದ  ಹೊಳಲ್ಕೆರೆ ಸವಿತಾ ರಘು, , ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಆಕಾಂಕ್ಷಿಗಳಾದ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ವಿನಯ ತಿಮ್ಮಾಪುರ, ರಾಮಪ್ಪ,  ಕೆಪಿಸಿಸಿ ಕಾರ್ಮಿಕ‌ ವಿಭಾಗದ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಕಾರ್ಯಧ್ಯಕ್ಷ ಹಾಲೇಶ್,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಭದ್ರಪ್ಪ, ಶಶಿಧರ್ ಮತ್ತು  ಸಾವಿರಾರು‌ ಕಾರ್ಯಕರ್ತರು ಕಚೇರಿ ಮುಂಭಾಗ ಜಮಾಯಿಸಿ ಹೂವಿನ ಹಾರ ಹಾಕಿ ಸಂಭ್ರಮಿಸಿದರು.
ಬಾಕ್ಸ್ 
ಇಂದು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಇಲಾಖೆಯಲ್ಲಿ ಏನೆಲ್ಲಾ ಸೌಲಭ್ಯಗಳು ದೊರೆಯುತ್ತದೆ ಎಂದು ತಿಳಿದು ಹೆಚ್ಚಿನ  ಜನರಿಗೆ  ಸಹಾಯ ಮಾಡಲು ಶ್ರಮಿಸುತ್ತೇನೆ.
ಟಿ.ರಘುಮೂರ್ತಿ 
ಶಾಸಕರು ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷರು 
[t4b-ticker]

You May Also Like

More From Author

+ There are no comments

Add yours