ಮರುಘಾ ಮಠಕ್ಕೆ ನೂತನ ಆಡಳಿತಧಿಕಾರಿ ನೇಮಕ ಮಾಡಿದ ಸರ್ಕಾರ

 

 

 

 

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಟ್ರಸ್ಟ್‌ ಮತ್ತು ಶಿಕ್ಷಣ ಸಂಸ್ಥೆಗೆ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

 

ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಅವರು ನ್ಯಾಯಂಗ ಬಂಧನದಲ್ಲಿ ಇರುವ ಹಿನ್ನೆಲೆಯಲ್ಲಿ ಟ್ರಸ್ಟ್‌ ಮತ್ತು ಶಿಕ್ಷಣ ಸಂಸ್ಥೆಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಒತ್ತಾಯ ಕೇಳಿ ಬಂದಿತ್ತು.

ಈ ಸಂಬಂಧ ರಾಜ್ಯ ಸರ್ಕಾರ ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯ ಕೋರಿದಾಗ, ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಟ್ರಸ್ಟಿನ ಸ್ವತ್ತು ರಕ್ಷಿಸುವ ಉದ್ದೇಶದಿಂದ ಸಂವಿಧಾನದ ಅನುಚ್ಛೇದ162 ರ ಅನ್ವಯ ಸರ್ಕಾರ ಆಡಳಿತಾಧಿಕಾರಿ ನೇಮಿಸಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು

[t4b-ticker]

You May Also Like

More From Author

+ There are no comments

Add yours