ಮತದಾನ ಕೇಂದ್ರಗಳ ಪಟ್ಟಿ ಪ್ರಕಟ ಯಾವ ಕ್ಷೇತ್ರದಲ್ಲಿ ಎಷ್ಟು ಮತಗಟ್ಟೆಗಳಿವೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.27: ಚುನಾವಣೆ ಆಯೋಗದಿಂದ ಅನುಮೋದನೆಗೊಂಡ ಜಿಲ್ಲೆಯ ಆರು ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯ 1,648 ಮತದಾನ ಕೇಂದ್ರಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಮೊಳಕಾಲ್ಮೂರು ಕ್ಷೇತ್ರದಲ್ಲಿ 284, ಚಳ್ಳಕೆರೆ ಕ್ಷೇತ್ರದಲ್ಲಿ 259, ಚಿತ್ರದುರ್ಗ ಕ್ಷೇತ್ರದಲ್ಲಿ 283, ಹಿರಿಯೂರು ಕ್ಷೇತ್ರದಲ್ಲಿ 285, ಹೊಸದುರ್ಗ ಕ್ಷೇತ್ರದಲ್ಲಿ 240 ಹಾಗೂ ಹೊಳಲ್ಕೆರೆ ಕ್ಷೇತ್ರದಲ್ಲಿ 297 ಮತಗಟ್ಟೆಗಳಿವೆ.
ಮತದಾನ ಕೇಂದ್ರಗಳ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಆಯಾ ತಹಶೀಲ್ದಾರ್, ನಾಡಕಚೇರಿ, ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಪಕ್ರಟಿಸಿದ್ದು ಹೆಚ್ಚಿನ ಮಾಹಿತಿಯನ್ನು ಸಂಬಂಧಿಸಿದ ಕಚೇರಿಗಳಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours