ಚಾಲಕನ ನಿಯಂತ್ರದ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಲಾರಿ ಮುಖ ಪೀಸ್

 

ಚಿತ್ರದುರ್ಗ(ಫೆ.05) : ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಮುಂಜಾನೆ ಸುಮಾರು 2  ‌ಗಂಟೆ ಸಮಯದಲ್ಲಿ  ಚಿತ್ರದುರ್ಗ ನಗರದಲ್ಲಿ ನಡೆದಿದೆ.

ನಗರದ ಸಾಯಿಬಾಬಾ ದೇವಸ್ಥಾನದ ಎದುರು ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು, ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ.

ವಿಷಯ ತಿಳಿಯಕೂಡಲೇ ಗಸ್ತು ತಿರುಗುತ್ತಿದ್ದ ಪೊಲೀಸರು ಮತ್ತು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[t4b-ticker]

You May Also Like

More From Author

+ There are no comments

Add yours