ಶಾಸಕ ಕಟ್ಟಿದ ಬಸ್ ನಿಲ್ದಾಣವನ್ನು ಸಂಸದ ಒಡೆಯಲು ಹೊರಟಿದ್ದಾರೆ

 

 

 

 

ಬೆಂಗಳೂರು: ಮೈಸೂರಿನಲ್ಲಿ ಗುಂಬಜ್‌ ಮಾದರಿಯ ಬಸ್‌ ನಿಲ್ದಾಣ ವಿಚಾರವಾಗಿ ಬಿಜೆಪಿ ಶಾಸಕ ಎಸ್‌.ಎ.ರಾಮದಾಸ್‌ ಹಾಗೂ ಸಂಸದ ಪ್ರತಾಪ್‌ ಸಿಂಹ ನಡುವೆ ಮುಸುಕಿನ ಗುದ್ದಾಟ ಮತ್ತೆ ಶುರುವಾಗಿದೆ. ಇದನ್ನು ‘ಬಿಜೆಪಿ vs ಬಿಜೆಪಿ ʼ ಎಂದು ಬೆಂಗಳೂರಿನಲ್ಲಿ ಟ್ವೀಟ್‌ ಮಾಡಿ ಕಾಂಗ್ರೆಸ್‌ ಕಾಲೆಳೆದಿದೆ.

 

 

ಬಿಜೆಪಿ vs ಬಿಜೆಪಿ ಕಿಚ್ಚು ಎಷ್ಟಿದೆ ಎನ್ನಲು ಮೈಸೂರಿನಲ್ಲಿ ನಡೆಯುತ್ತಿರುವ ಪ್ರತಾಪ್ ಸಿಂಹ vs ರಾಮದಾಸ್ ಕಾಳಗವೇ ಸಾಕ್ಷಿ. ಶಾಸಕರು ಕಟ್ಟಿಸಿದ ಬಸ್ ನಿಲ್ದಾಣವನ್ನು ಸಂಸದ ಒಡೆಯಲು ಹೊರಟಿದ್ದಾರೆ! ಬೇರೆಯವರ ಮನೆಯ ದೋಸೆಯ ತೂತನ್ನು ಹುಡುಕುವ ಬದಲು ಬಿಜೆಪಿಯವರು ತಮ್ಮ ಮನೆಯ ಕಾವಲಿಯ ತೂತನ್ನು ನೋಡಿಕೊಂಡರೆ ಒಳಿತು ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

[t4b-ticker]

You May Also Like

More From Author

+ There are no comments

Add yours