ರಾಜ್ಯ ಸರ್ಕಾರ’ದಿಂದ ‘ಅತಿವೃಷ್ಟಿ, ಪ್ರವಾಹ ಹಾನಿ ಪರಿಹಾರ’ ಹೆಚ್ಚಳ ಮಾಡಿ ಆದೇಶ

 

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಳೆಯಿಂದ ಉಂಟಾದಂತ ಅತಿವೃಷ್ಠಿ ಹಾಗೂ ಪ್ರವಾಹದಂತ ಹಾನಿಗೆ ನೀಡಲಾಗುತ್ತಿದ್ದಂತ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿ ಆದೇಶಿಸಲಾಗಿದೆ.

ಈ ಸಂಬಂಧ ಪರಿಷ್ಕೃತ ದರವನ್ನು ಜಾರಿ ಮಾಡಿ ಸರ್ಕಾರ ಆದೇಶಿಸಿದ್ದು, 2023-24ನೇ ಸಾಲಿನಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ನೀಡುವ ಇನ್‌ಪುಟ್ ಸಬ್ಸಿಡಿ ಪರಿಷ್ಕರಿಸಿ ಆದೇಶ ಹೊರಡಿಸಿದೆ.

ಪ್ರತಿವರ್ಷ ಮುಂಗಾರು ಹಾಗೂ ಹಿಂಗಾರು ಋತುವಿನಲ್ಲಿ ಭಾರಿ ಮಳೆಯಿಂದ ಹಾಗೂ ನದಿ ಹರಿವಿನಿಂದ ಉಂಟಾಗುವ ಪ್ರವಾಹದಿಂದ ಜನ-ಜಾನುವಾರು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿ ಆಗುತ್ತದೆ ಎಂದಿದೆ.

ಪ್ರತಿ ವರ್ಷ ಬೆಳೆ ಹಾನಿ ಆಗುವ ಪ್ರಕರಣಗಳಿಗೆ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಗಳಂತೆ ಅರ್ಹ ಪ್ರಕರಣಗಳಿಗೆ ಮಾತ್ರ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲಾಗುತ್ತಿದೆ. 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರವಾಹ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್ / ಎನ್‌ಡಿಆ‌ ಎಫ್ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಪರಿಷ್ಕೃತ ದರದಲ್ಲಿ ನೀಡಿರುವ ಪರಿಹಾರದಂತೆ ಬೆಳೆ ಹಾನಿಯಾದ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಇನ್‌ಪುಟ್ ಸಬ್ಸಿಡಿ ಮೊತ್ತವನ್ನು ಗರಿಷ್ಠ 2 ಹೆಕ್ಟೇರ್‌ಗೆ ಸೀಮಿತಗೊಳಿಸಿ ಪರಿಷ್ಕೃತ ದರದಲ್ಲಿ ಪಾವತಿಸಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ.

ಮಳೆಯಾಶ್ರಿತ ಬೆಳೆಗಳಿಗೆ ಮಾರ್ಗಸೂಚಿ ದರ 8,500 ರೂ. ಇದ್ದು ಅದನ್ನು 13,600 ರೂ.ಗೆ ನೀರಾವರಿ ಬೆಳೆಗಳಿಗೆ 17,000 ರೂ.ಗಳಿಂದ 22,500 ರೂ.ಗಳಿಗೆ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 22,000 ರೂ.ಗಳಿಂದ 28000 ರೂ.ಗೆ ಪರಿಷ್ಕರಿಸಿ, ಆದೇಶ ಹೊರಡಿಸಿದೆ.

[t4b-ticker]

You May Also Like

More From Author

+ There are no comments

Add yours