ಕಳೆದ ನಾಲ್ಕೈದು ವರ್ಷಗಳಿಂದ ನನೆಗುದಿಗೆ ಬಿದ್ದಿ ಚುನಾವಣೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಅಂತೂ ಕಾಲ ಕೂಡಿಬಂದಂತಿದೆ. ಹೌದು..ಕರ್ನಾಟಕದಲ್ಲಿ ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯನವರು ಸಚಿವರಿಗೆ ಸೂಚನೆ ನೀಡಿದ್ದಾರೆ. ಇನ್ನು ಲೋಕಲ್ ಲೀಡರ್ಸ್ ಕುತೂಹಲದಿಂದ ಕಾಯುತ್ತಿರುವ ಸ್ಥಳೀಯ ಸಂಸ್ಥೆಗಳು ಯಾವಾಗ ನಡೆಯಲಿದೆ ಎನ್ನುವ ವಿವರ ಇಲ್ಲಿದೆ.
ಕಳೆದ ನಾಲ್ಕು ವರ್ಷಗಳಿಂದ ಬಾಕಿ ಇರುವ ತಾಲೂಕು , ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಕೊನೆಗೆ ಆಸಕ್ತಿ ತೋರಿದೆ. ನನೆಗುದಿಗೆ ಬಿದ್ದಿದ್ದ Karnataka ಎಲ್ಲಾ ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್ನಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ. ಇದರ ಬೆನ್ನಲ್ಲೇ ಹಳ್ಳಿಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ
ಕಳೆದ ನಾಲ್ಕೈದು ವರ್ಷಗಳಿಂದ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆದಿರಲಿಲ್ಲ. ಜತೆಗೆ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದು, ಗ್ರಾಮ ಪಂಚಾಯ್ತಿಗಳ ಅವಧಿಯೂ ಮುಗಿಯುತ್ತಿದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ವಿಳಂಬದ ಪ್ರಕರಣ ನ್ಯಾಯಾಲಯದಲ್ಲಿದ್ದು, ತ್ವರಿತಗತಿಯಲ್ಲಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವೂ ತಿಳಿಸಿದೆ.






