ಚಳ್ಳಕೆರೆ: ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿಗಳು ಜನತೆಯ ಹಲವಾರು ಸಮಸ್ಯೆಗಳಿಗೆ ಆಸರೆಯಾಗಿವೆ. ವಿಶೇಷವಾಗಿ ಮಹಿಳಾ ಸಮುದಾಯ ಉಚಿತ ಬಸ್ ಪ್ರಯಾಣ, ಪ್ರತಿತಿಂಗಳು ದೊರೆಯುವ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಸಂತೃಪ್ತರಾಗಿದ್ಧಾರೆ. ಮಹಿಳೆಯ ವಿಶ್ವಾಸವನ್ನು ಗೆಲ್ಲುವಲ್ಲಿ ಕಾಂಗ್ರೆಸ್ ಪಕ್ಷ ಸಫಲವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗೆಲುವು ಸಾಧಿಸುವುದು ನಿಶ್ಚಿತ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಅವರು, ಶನಿವಾರ ಪರಶುರಾಮಪುರ ಹೋಬಳಿಯ ಟಿ.ಎನ್.ಕೋಟೆ, ಪಿ.ಮಹದೇವಪುರ, ಸಿದ್ದೇಶ್ವರದುರ್ಗ, ದೊಡ್ಡಚೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪಪರ ಮತಯಾಚನೆ ಮಾಡಿ ಮಾತನಾಡಿದರು. ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಈ ಭಾಗರ ಜನರಿಗೆ ಚಿರಪರಿಚಿತರು, ರಾಜ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶೇಷವಾಗಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ಬಾರಿ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅವರ ಸೇವೆಯನ್ನು ಗಮನಿಸಿ ಅವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿದೆ. ಆದ್ದರಿಂದ ಮತದಾರರು ಬಿ.ಎನ್.ಚಂದ್ರಪ್ಪನವರಿಗೆ ಮತ ನೀಡುವಂತೆ ವಿನಂತಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಟಿ.ಪ್ರಭುದೇವ್, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ, ಚನ್ನಕೇಶವ, ಕೆಎಂಎಫ್‌ನಿರ್ದೇಶಕ ಸಿ.ವೀರಭದ್ರಬಾಬು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗದ್ದಿಗೆತಿಪ್ಪೇಸ್ವಾಮಿ, ಸಿ.ಟಿ.ಶ್ರೀನಿವಾಸ್, ಡಿ.ಕೆ.ಕಾಟಯ್ಯ, ರೆಡ್ಡಿಹಳ್ಳಿಶಿವಣ್ಣ, ಎಚ್.ಹನುಮಂತಪ್ಪ, ಎನ್.ಮಂಜುನಾಥ, ಬಿ.ಟಿ.ರಮೇಶ್‌ಗೌಡ ಮುಂತಾದವರು ಪ್ರಚಾರ ಕಾ
[t4b-ticker]
+ There are no comments
Add yours