ನಾಡಿನ ಹಸಿರು ಹೆಚ್ಚಿಸಿದ, ಪರಿಸರ ಮೇಲೆ ಅಪಾರ ಕಾಳಜಿ ಹೊಂದಿದ್ದ ಸಾಲು ಮರ ತಿಮ್ಮಕ್ಕ ಅವರು ಇಂದು ಅನಾರೋಗ್ಯ ಕಾರಣದಿಂದ 114 ವಯಸ್ಸಿನಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಶುಕ್ರವಾರ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ರಾಜಕೀಯ ಗಣ್ಯರು ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಾಲುಮರದ ತಿಮ್ಮಕ್ಕ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ನವೆಂಬರ್ 14ರಂದು ನಿಧನರಾದರು. 2023 ರ ಅಕ್ಟೋಬರ್ನಲ್ಲಿ ಶ್ವಾಸನಾಳದ ಆಸ್ತಮಾದ ತೀವ್ರ ಉಲ್ಬಣದಿಂದಾಗಿ ಅಕ್ಟೋಬರ್ 3 ರಂದು ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ಸಾಲುಮರದ ತಿಮ್ಮಕ್ಕರನ್ನು ದಾಖಲಾಗಿತ್ತು. ಅಲ್ಲಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ, ಆಂಜಿಯೋಗ್ರಾಮ್ ಮಾಡಲಾಗಿದ್ದು ಎಡ ಮುಂಭಾಗದ ಅಪಧಮನಿ ನಿರ್ಬಂಧಿತವಾಗಿರುವುದು ಪತ್ತೆಯಾಗಿತ್ತು. ಇದರ ನಂತರ ಆಂಜಿಯೋಪ್ಲ್ಯಾಸ್ಟಿ ನಡೆಸಲಾಯಿತು. ತೀವ್ರ ಅನಾರೋಗ್ಯದಿಂದಾಗಿ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ನಮ್ಮನ್ನ ಅಗಲಿದ್ದಾರೆ.





