ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಚಿಂತನೆ :ಎನ್.ರಘುಮೂರ್ತಿ

 

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಇಂಗಿತ ವ್ಯಕ್ತಪಡಿಸಿದ ನಿರ್ಗಮನ ತಹಶೀಲ್ದಾರ್ ಎನ್.ರಘುಮೂರ್ತಿ.

ಚಳ್ಳಕೆರೆ-18 ಬೆಂಬಲಿಗರು, ಜನರು, ಹಿತೈಷಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಚುನಾವಣೆ ಸ್ಪರ್ಧೆ ಬಗ್ಗೆ ನಿರ್ಧಾರ ಮಾಡುವುದಾಗಿ ನಿರ್ಗಮನ ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.
ಅವರ ನಿವಾಸದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಕಳೆದ ಎರಡ್ಮೂರು ವರ್ಷಗಳಿಂದ ಜನರ ಸೇವೆ ಮಾಡಿದ್ದೇನೆ, ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ ಜನರ ಸೇವೆ ಮಾಡಬೇಕು ಎಂದು ಬಂದಿದ್ದೇನೆ ಜನರ ಸೇವೆ ಮಾಡುವ ಉದ್ದೇಶ ಹೊಂದಿದ್ದ ನನ್ನ ರಾಜೀನಾಮೆಯನ್ನು ಸರ್ಕಾರದ ಮಟ್ಟದಲ್ಲಿ ತಡೆಯಲಾಗಿತ್ತು. ಆದರೆ, ಕರ್ನಾಟಕ ಉಚ್ಚ ನ್ಯಾಯಾಲಯ ದ್ವಿಸದಸ್ಯ ಪೀಠ ಅದನ್ನು ತೆರವು ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಆ ಮೂಲಕ ನಾನು ಚುನಾವಣೆಯಲ್ಲಿ ಸ್ಪರ್ಧಿಸಬೇಕು, ಬೇಡವೇ ಎಂದು ಬೆಂಬಲಿಗರು, ಜನರು, ಹಿತೈಷಿಗಳ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದೇನೆ. ಅದಲ್ಲದೆ ರಾಜೀನಾಮೆ ನೀಡಿ ನಿಮಗೆ ನಮ್ಮ‌ ಪಕ್ಷದಿಂದ ಟಿಕೆಟ್ ಕೊಡುವುದಾಗಿ ಕೆಲ ಪಕ್ಷದ ನಾಯಕರು ಭರವಸೆ ನೀಡಿದ್ದರು. ಅದರಂತೆ ಡಿಸೆಂಬರ್-2022ರಲ್ಲೇ ನನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೆ ಆದರೆ ಅದು ಕಾರಣಾಂತರಗಳಿಂದ ಆಗಿರಲಿಲ್ಲ. ಈ ಕೋರ್ಟ್ ಮೂಲಕ ಆದೇಶವಾಗಿದ್ದು ಪಕ್ಷಗಳ ನಾಯಕರನ್ನು ಮಾತನಾಡಿಸಿದ್ದೇನೆ ಕಾದುನೋಡಿ ಎಂಬ ಭರವಸೆಯನ್ನು ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಚರ್ಚಿಸಿ ನಾಳೆ 4ಗಂಟೆಗೆ ನನ್ನ ಮುಂದಿನ ಹೆಜ್ಜೆ ನಿರ್ಧರಿಸುವೆ. ಕ್ಷೇತ್ರದಲ್ಲಿ ನೂರಾರು ಕಾರ್ಯಗಳನ್ನು ಮಾಡುವ ಉದ್ದೇಶದಿಂದ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.

[t4b-ticker]

You May Also Like

More From Author

+ There are no comments

Add yours